ಕೊಡಗು: ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ರಷಿಕ್ ಕುಶಾಲಪ್ಪ(20), ಆಕಾಶ ಬಿದ್ದಪ್ಪ (20), ಸುದೀಶ ಅಯ್ಯಪ್ಪ(20) ಎಂದು ಹೇಳಲಾಗಿದೆ. ಮೂವರು ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದರು ಎನ್ನಲಾಗಿದೆ. ಐವರು ಸ್ನೇಹಿತರು ಪೊನ್ನಂಪೇಟೆ ಸಮೀಪದ ಕೊಂಗಣ ನದಿ ಬಳಿ ತೆರಳಿ ನೀರಿಗೆ ಇಳಿದಿದ್ದಾರೆ. ನೀರಿನ ರಭಸಕ್ಕೆ ಮೂವರು ಕೊಚ್ಚಿ ಹೋಗಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ದಡವನ್ನು ಸೇರಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಗೋಣಿಕೊಪ್ಪಲು ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement