ವೀಡಿಯೊ…| ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಗೈದ ರಾಮಜನ್ಮಭೂಮಿ ವಿವಾದದ ಮುಸ್ಲಿಂ ಪರ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಶನಿವಾರ (ಡಿಸೆಂಬರ್ 30) ರೋಡ್‌ ಶೋದಲ್ಲಿ ಭಾಗವಹಿಸಿದ ವೇಳೆ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಪ್ರಮುಖ ಅರ್ಜಿದಾರರಲ್ಲಿ ಒಬ್ಬರಾಗಿದ್ದ ಇಕ್ಬಾಲ್ ಅನ್ಸಾರಿ ಅವರು ಪ್ರಧಾನಿ ಮೋದಿಗೆ ಪುಷ್ಪವೃಷ್ಟಿ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.
ಇಕ್ಬಾಲ್ ಅನ್ಸಾರಿ ಮತ್ತು ಇತರರು ರಸ್ತೆಬದಿಯಲ್ಲಿ ನಿಂತಿದ್ದರು. ಅವರ ಎರಡೂ ಕೈಗಳಲ್ಲಿ ಹೂವುಗಳಿದ್ದವು. ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಆಗಮಿಸಿದ ತಕ್ಷಣ, ಅವರು ಹೂವಿನ ದಳಗಳನ್ನು ಸುರಿಸಿ ಸ್ವಾಗತಿಸಿದರು.
ಮುಂದಿನ ತಿಂಗಳು ಭವ್ಯ ರಾಮಮಂದಿರ ಉದ್ಘಾಟನೆಯಾಗಲಿರುವ ಅಯೋಧ್ಯೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣದ ವರೆಗೆ ರೋಡ್ ಶೋ ಮೂಲಕ ತೆರಳಿದ ಮೋದಿ ಅವರಿಗೆ ಜನರು ಪುಷ್ಪ ವೃಷ್ಟಿ ಮಾಡಿ, ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು. ಈ ವೇಳೆ ಇಕ್ಬಾಲ್ ಅನ್ಸಾರಿ ಕೂಡ ಹಾಜರಿದ್ದು ಅವರ ಮೇಲೆ ಪುಷ್ಪಗಳನ್ನು ಸುರಿದಿದ್ದಾರೆ.

ಪ್ರಮುಖ ಸುದ್ದಿ :-   ಆಸ್ಪತ್ರೆಯಲ್ಲಿ ಎಡವಟ್ಟು : 4 ವರ್ಷದ ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡುವುದರ ಬದಲು ನಾಲಿಗೆಗೆ ಆಪರೇಶನ್‌ ಮಾಡಿದ ವೈದ್ಯರು...!

“ಅಯೋಧ್ಯೆಯ ಭೂಮಿ ಅಪ್ರತಿಮವಾಗಿದೆ. ಪ್ರಧಾನಿ ಮೋದಿ ನಮ್ಮ ಸ್ಥಳಕ್ಕೆ ಬಂದಿದ್ದಾರೆ, ಅತಿಥಿಗಳನ್ನು ಸ್ವಾಗತಿಸುವುದು ನಮ್ಮ ಕರ್ತವ್ಯ” ಎಂದು ಅನ್ಸಾರಿ ತಿಳಿಸಿದ್ದಾರೆ. ಅವರು ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಪರವಾದ ಪ್ರಮುಖ ದಾವೆದಾರರಾಗಿದ್ದರು.
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ, ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಅಲ್ಲದೆ, ಎರಡು ಅಮೃತ ಭಾರತ, ಆರು ವಂದೇ ಭಾರತ ರೈಲುಗಳಿಗೆ ಚಾಲನೆ ನೀಡಿದರು

ಅಯೋಧ್ಯೆಗೆ ಬಂದಿಳಿದ ನಂತರ, ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸಮ್ಮುಖದಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ಅವರು ಅಯೋಧ್ಯಾ ಧಾಮ ನಿಲ್ದಾಣದಿಂದ ಎರಡು ಹೊಸ ಅಮೃತ ಭಾರತ ರೈಲುಗಳು ಮತ್ತು ಆರು ಹೊಸ ವಂದೇ ಭಾರತ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಬಿಎಸ್‌ಇ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸ್ಟಂಪ್ಡ್‌ ಔಟ್‌ ಮಾಡಿದ ಬ್ರೋಕರ್‌ : ವೀಕ್ಷಿಸಿ

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement