ಕರ್ನಾಟಕದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢ; ಒಂದು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ (ಜನವರಿ 1) 296 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಹಾಗೂ ಒಬ್ಬರು ಸಾವು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಲಾಖೆ ಹೊರಡಿಸಿದ ಕೋವಿಡ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 1,245 ಸಕ್ರಿಯ ಕೋವಿಡ್ ಸೋಂಕಿತರಿದ್ದು, ಇದೇವೇಳೆ 50 ಮಂದಿ ಚೇತರಿಸಿಕೊಂಡಿದ್ದಾರೆ.
ಸಕ್ರಿಯ ರೋಗಿಗಳಲ್ಲಿ, 1,179 ಮಂದಿ ಮನೆ ಪ್ರತ್ಯೇಕತೆಯಲ್ಲಿದ್ದು, 66 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಇದರಲ್ಲಿ 20 ಮಂದಿ ಐಸಿಯುನಲ್ಲಿದ್ದಾರೆ.
ಧನಾತ್ಮಕತೆ ಪ್ರಮಾಣ ಶೇ. 5.89 ರಷ್ಟು ಇದೆ. ಬೆಂಗಳೂರಿನಲ್ಲಿ 131 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೊರೋನಾ ಸೋಂಕಿತ 55 ವರ್ಷದ ವ್ಯಕ್ತಿ ಲಸಿಕೆ ಪಡೆದಿದ್ದರೂ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದಾರೆ. ಅವರು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಇಲಾಖೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement