ನಾವು ರಾಮ ಮಂದಿರದ ಪರವಾಗಿದ್ದೇವೆ, ನಾನೂ ರಾಮ ಭಜನೆಗೆ ಹೋಗ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಯೋಧ್ಯೆ ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಲ ವಿಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಹಾಗೂ ಉದ್ಘಾಟನೆಗೆ ನಮ್ಮ ಯಾವುದೇ ವಿರೋಧವಿಲ್ಲ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ಕಟ್ಟುವುದಕ್ಕೂ ನನ್ನ ವಿರೋಧ ಇಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಕಟ್ಟಿಸಿದ್ದಾರೆ. ನಾನು ಹಿಂದೆ ಬಿಡುವಿದ್ದಾಗಲೆಲ್ಲ ನಮ್ಮೂರಿನ ದೇವಸ್ಥಾನದಲ್ಲಿ ರಾಮನ ಅನೇಕ ಭಜನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ರಾಮ ಮಂದಿರವನ್ನು ಕಟ್ಟಿರುವುದು ಬಹಳ ಸಂತೋಷ ವಿಷಯ ಎಂದು ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ ರಾಮಮಂದಿರ ಉದ್ಘಾಟನೆಯನ್ನು ಬಳಸಿಕೊಂಡಿದೆ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರು ಆರೋಪಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಹೇಳಿಕೆ ಬಂದಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಬಳಸಿಕೊಂಡಿತ್ತು. ಇದೀಗ ಭಗವಾನ್ ರಾಮನ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಸುಧಾಕರ ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement