ಬೆಳಗಾವಿ: ಹೊಸ ವರ್ಷದಂದೇ ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿಯಲ್ಲಿ ಹೊಸ ವರ್ಷದ ಸಂದರ್ಭದಲ್ಲೇ ಕಿಡಿಗೇಡಿಗಳು ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.
ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಮಧ್ಯರಾತ್ರಿ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.
ಗ ಸುಳಗದಲ್ಲಿ ಕನ್ನಡಿಗರ ಭಾವನೆ ಕೆಣಕಿದವರಿಗೆ ಸರ್ಕಾರ ತಕ್ಕ ಶಿಕ್ಷೆ ನೀಡಬೇಕು ಎಂದು ಕನ್ನಡ ಮುಖಂಡರು ಒತ್ತಾಯಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement