ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ನವದೆಹಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ಜನವರಿ 4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವೈ.ಎಸ್. ಶರ್ಮಿಳಾ ಅವರು ವೈ ಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದಾರೆ.
ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಏತನ್ಮಧ್ಯೆ, ವೈ.ಎಸ್. ಶರ್ಮಿಳಾ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಪಕ್ಷದ ಎಲ್ಲಾ ನಾಯಕರೊಂದಿಗೆ ಸಭೆ ಕರೆದಿದ್ದಾರೆ.
ತೆಲಂಗಾಣದಲ್ಲಿ ಇತ್ತೀಚೆಗಷ್ಟೇ ಮುಕ್ತಾಯವಾದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ವೈಎಸ್ ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲ ನೀಡಿದ್ದರು.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ತೆಲಂಗಾಣದಲ್ಲಿ ನವೆಂಬರ್ 30 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ನಿರಾಕರಿಸಿದ್ದರು.ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶವಿರುವುದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದರು.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement