ಹುಣಸೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಮೈಸೂರು: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಪಿರಿಯಾಪಟ್ಟಣಕ್ಕೆ ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿಯ ರಭಸಕ್ಕೆ ಜೀಪಿನಲ್ಲಿದ್ದವರು ಹೊರಗೆ ಎಸೆಯಲ್ಪಟ್ಟಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಎಚ್.ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಕೂಲಿ ಕಾರ್ಮಿಕರು ಎನ್ನಲಾಗಿದ್ದು. ಗಂಭೀರ ಗಾಯಗೊಂಡಿದ್ದ ಐದು ಮಂದಿಯನ್ನು ಹುಣಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಮೃತರ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement