ಜನವರಿ 22 ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯೆ ಯಾತ್ರಿಗಳಿಗೆ ರಕ್ಷಣೆ ನೀಡಬೇಕು : ಬಿ.ಕೆ. ಹರಿಪ್ರಸಾದ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಜನವರಿ 22ರಂದು ಅಯೋಧ್ಯೆ(Ayodhya)ಗೆ ತೆರಳುವವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಗೋಧ್ರಾ (Godhra) ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ ಎಂದು ಬಿ.ಕೆ.ಹರಿಪ್ರಸಾದ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೋಧ್ರಾ ಮಾದರಿಯ ದುರಂತ ಮತ್ತೆ ಸಂಭವಿಸುತ್ತದೆ ಎಂದು ನಮಗೆ ಮಾಹಿತಿ ಲಭಿಸಿದೆ. ಇದರ ಬಗ್ಗೆ ನಮಗೆ ಮಾಹಿತಿ ಸಿಕ್ಕ ನಂತರ ಹೇಳುತ್ತಿದ್ದೇನೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ಸೂಕ್ತ ರಕ್ಷಣೆ ನೀಡುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ಇದು ಧಾರ್ಮಿಕ ಕಾರ್ಯಕ್ರಮ ಎಂದು ಅನ್ನಿಸುತ್ತಿಲ್ಲ. ಇದೊಂದು ರಾಜಕೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದ ಅವರು, ಅದು ಧಾರ್ಮಿಕ ಕಾರ್ಯಕ್ರಮವಾಗಿದ್ದರೆ ಧಾರ್ಮಿಕ ಮುಖಂಡರು ಭಾಗಿಯಾಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿಯ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮವಾಗುತ್ತಿತ್ತು. ಆಗ ಆಮಂತ್ರಣ ಇಲ್ಲದೆಯೇ ನಾವು ಉದ್ಘಾಟನೆಗೆ ಹೋಗುತ್ತಿದ್ದೆವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಸೇರಿದಂತೆ ರಾಜಕೀಯ ನಾಯಕರು ಉದ್ಘಾಟನೆಗೆ ಬರುತ್ತಿದ್ದಾರೆ. ಅವರು ಧರ್ಮ ಗುರುಗಳಾ..? ಇದು ರಾಜಕೀಯ ಕಾರ್ಯಕ್ರಮ ಎಂದು ಹೇಳಿದರು.
ನಮಗೆ ಸಿದ್ದರಾಮಯ್ಯ ಅವರೇ ರಾಮ ಎಂದು ಮಾಜಿ ಸಚಿವ ಹೆಚ್.​ ಆಂಜನೇಯ ಹೇಳಿಕೆಗೆ ಅವರು ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement