ಜನವರಿ13 ರಂದು ಕೆ-ಸೆಟ್ ಪರೀಕ್ಷೆ : ವಸ್ತ್ರ ಸಂಹಿತೆ ಕಡ್ಡಾಯ, ಪ್ರವೇಶಪತ್ರ ಡೌನ್ ಲೋಡ್ ಗೆ ಸೂಚನೆ

ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೆ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೆ, ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಪರೀಕ್ಷೆಯು ಜನವರಿ 13ರಂದು ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆ ವರೆಗೆ ನಡೆಯಲಿದೆ. ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅಭ್ಯರ್ಥಿಗಳು https://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕುಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಈ ವೇಳೆ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಒಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪರೀಕ್ಷೆಗೆ ವಸ್ತ್ರ ಸಂಹಿತೆ….
ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೊಳಿಸಿದೆ. ಪರೀಕ್ಷೆಯಲ್ಲಿ ಅಕ್ರಮಗಳಿಗೆ ಅವಕಾಶ ನೀಡದಿರಲು ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಪುರುಷ ಅಭ್ಯರ್ಥಿಗಳಿಗೆ ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಕಡ್ಡಾಯವಾಗಿದೆ. ಇದರ ಭಾಗವಾಗಿ ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಜತೆಗೆ, ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.
ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂಗಳನ್ನು ಧರಿಸಿಕೊಂಡು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಹಿಳೆಯರಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ತಿಳಿಸಲಾಗಿದೆ.

ನಿಷೇಧಿತ ವಸ್ತುಗಳು…
ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪಣ ತೊಟ್ಟಿರುವ ಪರೀಕ್ಷಾ ಪ್ರಾಧಿಕಾರವು, ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬ್ಲೂ ಟೂತ್, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಪೆನ್ ಡ್ರೈವ್, ಇಯರ್ ಫೋನ್, ಕೈ ಗಡಿಯಾರ, ಮೈಕ್ರೋಫೋನ್, ಪೆನ್ಸಿಲ್, ಎರೇಸರ್, ಜಾಮಿಟ್ರಿ ಪೆಟ್ಟಿಗೆ ಮತ್ತು ಲಾಗ್ ಟೇಬಲ್ ಇತ್ಯಾದಿಗಳನ್ನು ತರುವಂತಿಲ್ಲ. ಜತೆಗೆ ಟೋಪಿ/ಮಾಸ್ಕ್ ಹಾಕಿಕೊಂಡು ಬರುವಂತಿಲ್ಲ ಎಂದು ಸೂಚನೆ ನೀಡಿದೆ.

ಅಭ್ಯರ್ಥಿಗಳು ಪ್ರವೇಶ ಪತ್ರದ ಜತೆಗೆ ಅಧಿಕೃತ ಸರ್ಕಾರಿ ಗುರುತಿನ ಚೀಟಿ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಬೇಕು.
ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪುವುದು ಸೂಕ್ತ
ನಿಗದಿತ ಪರೀಕ್ಷಾ ಕೇಂದ್ರವನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಇರುವುದಿಲ್ಲ .
ಅಭ್ಯರ್ಥಿಯು ಓಎಂಆರ್ ಉತ್ತರ ಪತ್ರಿಕೆಯಲ್ಲಿ ನೊಂದಣಿ ಸಂಖ್ಯೆಯನ್ನು ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್‌ ಮಾಡಬೇಕು. ನಂತರ ಅಭ್ಯರ್ಥಿಯು ಪ್ರಶ್ನೆಪತ್ರಿಕೆಯ ವರ್ಷನ್‌ ಕೋಡ್‌ ಅನ್ನು ತಪ್ಪಿಲ್ಲದೆ ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್‌ ಮಾಡಬೇಕು.

ಕೆಸೆಟ್‌ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡುವುದು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬೇಕು.
ತೆರೆದ ಮುಖಪುಟದಲ್ಲಿ ಇತ್ತೀಚಿನ ಪ್ರಕಟಣೆಗಳು ಎಂದಿರುವಲ್ಲಿ ಗಮನಿಸಬೇಕು.
‘KSET-2023′ ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್’ ಎಂದಿರುವಲ್ಲಿ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ವೆಬ್‌ಪೇಜ್‌ ಓಪನ್‌ ಆಗುತ್ತದೆ.
ಪರೀಕ್ಷೆ ಆಯ್ಕೆ ಮಾಡಿ, ಅರ್ಜಿ ಸಂಖ್ಯೆ, ನಿಮ್ಮ ಹೆಸರಿನ ಮೊದಲ 4 ಅಕ್ಷರ ಟೈಪ್‌ ಮಾಡಬೇಕು.
‘Submit’ ಎಂದಿರುವಲ್ಲಿ ಕ್ಲಿಕ್ ಮಾಡಬೇಕು
ಪ್ರವೇಶ ಪತ್ರ ಪ್ರದರ್ಶಿತವಾಗುತ್ತದೆ. ಅದನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement