ಕರ್ನಾಟಕದಲ್ಲಿ ಗುರುವಾರ 298 ಮಂದಿಗೆ ಕೋವಿಡ್‌ ಸೋಂಕು, ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 298 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೂ ನಾಲ್ವರು ಮೃತಪಟ್ಟಿದ್ದಾರೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ಇದೇವೇಳೆ ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಸಕಾರಾತ್ಮಕತೆ ದರ ಶೇ. 3.82 ರಷ್ಟಿದೆ.

ಸೋಂಕಿತರಲ್ಲಿ 1,168 ಮಂದಿ ಮನೆ ಆರೈಕೆಗೆ ಒಳಗಾದರೆ, 72 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದು, 172 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 5, ಉತ್ತರ ಕನ್ನಡ 4 ಮತ್ತು ವಿಜಯನಗರ 5 ಕೊವಿಡ್​ ಕೇಸ್ ಪತ್ತೆ ಆಗಿವೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement