ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಕಾಲ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಒಂದು ವಾರ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ಕೊಪ್ಪಳ, ರಾಯಚೂರು, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement