ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು.
ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅವರು ತಮ್ಮ ವೈಎಸ್‌ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದರು ಮತ್ತು ಕಾಂಗ್ರೆಸ್‌ ಪಕ್ಷವು ತನಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ಹೇಳಿದರು.
ಕಾಂಗ್ರೆಸ್ ಅನ್ನು ಶ್ಲಾಘಿಸಿದ ಶರ್ಮಿಳಾ, ಇದು ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದ್ದು, ಅದು ಎಲ್ಲಾ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ ಮತ್ತು ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುತ್ತದೆ ಎಂದು ಹೇಳಿದರು.
ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ತನ್ನ ತಂದೆಯ ಕನಸಾಗಿತ್ತು ಮತ್ತು ಅದಕ್ಕೆ ಕೊಡುಗೆ ನೀಡಲು ನಾನು ಸಂತೋಷಪಡುತ್ತೇನೆ ಎಂದು ಅವರು ಹೇಳಿದರು.

ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ.
ಮಂಗಳವಾರ ಹೈದರಾಬಾದ್‌ನಲ್ಲಿ ಶರ್ಮಿಳಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ “ನಿರ್ಣಾಯಕ” ಘೋಷಣೆ ಮಾಡುವುದಾಗಿ ಹೇಳಿದ್ದರು.
ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್‌ ಆಡಳಿತ ಕೊನೆಗೊಳಿಸಲು ಶರ್ಮಿಳಾ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಿದ್ದರು.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement