ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 328 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ (ಕಳೆದ 24 ಗಂಟೆಗಳಲ್ಲಿ) ಹೊಸದಾಗಿ 328 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದೇವೇಳೆಸೋಂಕಿನಿಂದ ಗುಣಮುಖರಾಗಿ 409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1159ಕ್ಕೆ ಏರಿಕೆಯಾಗಿದೆ. ರಾಜ್ಯದಾದ್ಯಂತ ಶುಕ್ರವಾರ ಒಟ್ಟು 7205 ಮಂದಿಗೆ ಕೋವಿಡ್‌ 19 ಪರೀಕ್ಷೆ ನಡೆಸಲಾಗಿದ್ದು, 328 ಮಂದಿಗೆ ಸೋಂಕು ದೃಢಪಟ್ಟಿದೆ. ಕೋವಿಡ್‌ ಸಕಾರಾತ್ಮಕದ ದರ ಶೇ. 4.55 ಇದೆ. 1159 ಸಕ್ರಿಯ ಪ್ರಕರಣಗಳ ಪೈಕಿ 1087 ಮಂದಿ ಹೋಮ್‌ ಐಸೋಲೇಷನ್‌ನಲ್ಲಿದ್ದು, 72 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಅಂದರೆ 628 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಶುಕ್ರವಾರ ಬೆಂಗಳೂರಿನಲ್ಲಿ 163 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 4, ಬಳ್ಳಾರಿ 9, ಬೆಂಗಳೂರು ಗ್ರಾಮಾಂತರ 18, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 7, ಚಿತ್ರದುರ್ಗ 5, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 2, ಗದಗ 1, ಹಾಸನ 12, ಹಾವೇರಿ 1, ಕಲಬುರಗಿ 4, ಕೋಲಾರ 1, ಮಂಡ್ಯ 7, ಮೈಸೂರು 26, ರಾಯಚೂರು 4, ರಾಮನಗರ 3 ಶಿವಮೊಗ್ಗ 6, ತುಮಕೂರು 15, ಉಡುಪಿ 1, ಉತ್ತರ ಕನ್ನಡ 6, ವಿಜಯನಗರದಲ್ಲಿ 7 ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement