ಪಡಿತರ ಹಗರಣದ ಶೋಧ ಕಾರ್ಯಕ್ಕೆ ತೆರಳಿದ್ದ ಇ.ಡಿ. ಅಧಿಕಾರಿಗಳು, ವಾಹನಗಳ ಮೇಲೆ ದಾಳಿ

ಕೋಲ್ಕತ್ತಾ: ಪಡಿತರ ಹಗರಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಭದ್ರತಾ ಪಡೆಗಳ ತಂಡದ ಮೇಲೆ ಬಂಗಾಳದ ಉತ್ತರ 24 ಪರಗಣದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ದಾಳಿ ವೇಳೆ ಸ್ಥಳದಲ್ಲಿದ್ದ ಹಲವಾರು ಮಾಧ್ಯಮ ವಾಹನಗಳನ್ನು ಸಹ ಧ್ವಂಸಗೊಳಿಸಲಾಯಿತು ಎಂದು ವರದಿಯಾಗಿದೆ.
ಶೇಖ್ ಬೆಂಬಲಿಗರು ಅಧಿಕಾರಿಗಳ ತಂಡದ ಮೇಲೆ ಹಲ್ಲೆ ನಡೆಸಿದ್ದರಿಂದ ಟಿಎಂಸಿ ನಾಯಕನ ಮನೆಯಲ್ಲಿ ಶೋಧ ಕಾರ್ಯಾಚರಣೆ ಸಾಧ್ಯವಾಗಲಿಲ್ಲ.
ತೃಣಮೂಲ ನಾಯಕ ಶಹಜಹಾನ್ ಶೇಖ್ ಅವರ ನಿವಾಸವನ್ನು ಸಮೀಪಿಸುತ್ತಿದ್ದಂತೆ ತಂಡದ ಮೇಲೆ ಅವರ ಬೆಂಬಲಿಗರಿಂದ ದಾಳಿ ನಡೆಯಿತು. ನಂತರ ಶಹಜಹಾನ್ ಶೇಖ್ ಅವರನ್ನು ಪ್ರಕರಣದಲ್ಲಿ ಬಂಧಿಸಲಾಯಿತು.
ವಿವರಗಳ ಪ್ರಕಾರ, 200 ಕ್ಕೂ ಹೆಚ್ಚು ಸ್ಥಳೀಯರು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಅರೆಸೇನಾ ಪಡೆಗಳನ್ನು ಸುತ್ತುವರೆದರು, ಅವರ ಕಾರುಗಳ ಗಾಜುಗಳನ್ನು ಪುಡಿ ಮಾಡಿದರು.
“ಎಂಟು ಜನರು ಸ್ಥಳಕ್ಕೆ ಬಂದಿದ್ದೇವೆ. ನಾವು ಮೂವರು ಘಟನೆ ಸ್ಥಳದಿಂದ ಬೇರೆಡೆಗೆ ಬಂದೆವು. ನಾವು ಶೋಧ ಕಾರ್ಯಾಚರಣೆಗೆ ಬಂದಾಗ ಅವರು ನಮ್ಮ ಮೇಲೆ ದಾಳಿ ಮಾಡಿದರು” ಎಂದು ED ಮೇಲಿನ ದಾಳಿಯ ಕುರಿತು ತಂಡದ ಸದಸ್ಯರೊಬ್ಬರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ ದಾಳಿಗಳು ತಿಂಗಳುಗಳಿಂದ ನಡೆಯುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಫಲಾನುಭವಿಗಳಿಗೆ ನೀಡಲಾಗಿದ್ದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪಡಿತರದ ಸುಮಾರು 30 ಪ್ರತಿಶತವನ್ನು ಮುಕ್ತ ಮಾರುಕಟ್ಟೆಗೆ ವರ್ಗಾಯಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಈ ಹಿಂದೆ ಬಹಿರಂಗಪಡಿಸಿತ್ತು.
ಕಳೆದ ವರ್ಷ, ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಬಂಧಿಸಿತ್ತು.

ಇದರ ಬೆನ್ನಲ್ಲೇ ಇಡಿ ಮಲ್ಲಿಕ್ ಸಹಚರರನ್ನು ಈ ಸಂಬಂಧ ವಿಚಾರಣೆ ನಡೆಸಿತ್ತು. ಅವರ ಆಪ್ತ ಸಹಾಯಕ ಅಮಿತ್ ಡಿ ಮತ್ತು ಅವರ ಆಪ್ತ ಅಭಿಜಿತ್ ದಾಸ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಸ್ ಅವರನ್ನು ಹೌರಾದಲ್ಲಿನ ಅವರ ನಿವಾಸದಿಂದ ಶೋಧದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯ ಬಗ್ಗೆ ಪ್ರಶ್ನಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.
ಕೋವಿಡ್-19 ಅವಧಿಯಲ್ಲಿ ರಾಜ್ಯದಲ್ಲಿ ಪಡಿತರ ವಿತರಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಡರಲ್ ಏಜೆನ್ಸಿಯು 2022 ರಲ್ಲಿ ಎಫ್‌ಐಆರ್ ದಾಖಲಿಸಿತು ಮತ್ತು ನಂತರ ಅಕ್ಟೋಬರ್ 14, 2023 ರಂದು ಒಬ್ಬ ಉದ್ಯಮಿ ಬಾಕಿಬುರ್ ರಹೆಮಾನ್ ಅವರನ್ನು ಬಂಧಿಸಲಾಯಿತು. ಅವರು ಸಚಿವರ ಆಪ್ತರಾಗಿದ್ದರು. ಈ ರೆಹೇಮಾನ್ ಕೋಟ್ಯಂತರ ಆಸ್ತಿ ಹೊಂದಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ವೀಡಿಯೊ...| 'ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ' ಎಂದ ಕಾಂಗ್ರೆಸ್‌ ಹಿರಿಯ ನಾಯಕ...! ಟಿಎಂಸಿ ಕೆಂಡ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement