ಹುಬ್ಬಳ್ಳಿ ಗಲಭೆ ಪ್ರಕರಣ : ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರು

ಹುಬ್ಬಳ್ಳಿ : 1992ರ ಗಲಭೆ ಪ್ರಕರಣದಲ್ಲಿ ಬಂಧಿತನಾದ ಕರಸೇವಕ ಶ್ರೀಕಾಂತ ಪೂಜಾರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸೇಷನ್ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.
ಶ್ರೀಕಾಂತ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ಎರಡೂ ಕಡೆಯ ವಾದ ಆಲಿಸಿ ಆದೇಶ ಗುರುವಾರ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಶುಕ್ರವಾರ ಪ್ರಕಟಿಸಿದರು.
ಇಬ್ಬರು ಜಾಮೀನುದಾರರ ಭದ್ರತೆ ನೀಡಬೇಕು. ಒಂದು ಲಕ್ಷ ರೂಪಾಯಿ 2 ಬಾಂಡ್ ನೀಡಬೇಕು. ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು. ನ್ಯಾಯಾಲಯದ ಪರವಾನಿಗೆ ಇಲ್ಲದೇ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ.
ಆರೋಪಿ ಪರ ವಕೀಲರಾದ ಸಂಜೀವ ಬಡಸ್ಕರ್‌ ಮತ್ತು ಅಶೋಕ ಅಣ್ವೇಕರ್ ವಾದ ಮಂಡಿಸಿದ್ದರು. ಸರ್ಕಾರದ ಪರ ಬಿ.ಎನ್‌. ಅಮರಾವತಿ ವಾದ ಮಂಡಿಸಿದ್ದರು. ಆರೋಪಿ ಶ್ರೀಕಾಂತ ಹುಬ್ಬಳ್ಳಿಯ ಉಪಕಾರಾಗೃಹದಲ್ಲಿ ಇದ್ದಾರೆ.

ಪ್ರಕರಣದ ಹಿನ್ನೆಲೆ:
ದೀರ್ಘಾವಧಿಯಿಂದ ಬಾಕಿ ಉಳಿದ ಪ್ರಕರಣಗಳ (ಕಾನೂನು ವಿಚಾರಣಾ ಪ್ರಮಾಣಪತ್ರ- ಎಲ್‌ಪಿಸಿ)ಅಡಿಯಲ್ಲಿ ಡಿಸೆಂಬರ್‌ 29ರಂದು ಶ್ರೀಕಾಂತ ಪೂಜಾರಿ ಅವರನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದರು. ‘ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಸಮೀಪಿಸುತ್ತಿರುವಾಗ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಕಾಂಗ್ರೆಸ್‌ ಮಾಡುತ್ತಿದೆ’ ಎಂದು ಆರೋಪಿಸಿ ಹಾಗೂ ಬಂಧನ ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತ್ತು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್​; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್‌..!

ಪ್ರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement