ಎರಡು ಕಾರು, ಲಾರಿ ಮಧ್ಯೆ ಸರಣಿ ಅಪಘಾತ : ನಾಲ್ವರು ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜನವರಿ 6) ಬೆಳಗಿನ ಜಾವ ಸಂಭವಿಸಿದೆ.
ಘಟನೆಯಲ್ಲಿ ಹಾಸನದ ‌ಮೂಲದ ಮೂವರು, ಬೆಂಗಳೂರಿನ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅತಿಯಾಗಿ ಮಂಜು ಮುಸುಕಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತರು ಹಾಸನದ ಮಣಿಕಂಠ (26), ಪವನ(23), ಚಂದನ (31) ಹಾಗೂ ಬೆಂಗಳೂರಿನ ಪ್ರಭು (34) ಎಂದು ಹೇಳಲಾಗಿದೆ. ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಒಯ್ಯಲಾಗಿದೆ.
ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರು ಹಾಗೂ ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement