ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿರುವ ಡಾ. ಮೋಹನ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಸರ್ಕಾರಿ ಹುದ್ದೆಯಲ್ಲಿರಬಾರದು ಎಂಬ ಹಿನ್ನೆಲೆಯಲ್ಲಿ ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕಳೆದ 15 ವರ್ಷಗಳಿಂದ ಹುದ್ದೆಯಲ್ಲಿದ್ದ ಡಾ ಮೋಹನ ಅವರಿಗೆ ಆರ್‌ಎಸ್‌ಎಸ್‌ ಮುಖಂಡರೊಂದಿಗೆ ನೇರ ಸಂಪರ್ಕ ಇದೆ ಎನ್ನಲಾಗಿದೆ. ಹೀಗಾಗಿ ಡಾ ಮೋಹನ ಟಿಕೆಟ್ ಸಿಕ್ಕೇ ಸಿಗುತ್ತದೆಂಬ ವಿಶ್ವಾಸದಲ್ಲಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಂಸದ ವಿ.ಶ್ರೀನಿವಾಸಪ್ರಸಾದ ಈಗಾಗಲೇ ಘೋಷಿಸಿದ್ದಾರೆ. ಹೀಗಾಗಿ ಅಲ್ಲಿ ಸ್ಪರ್ಧಿಸಬೇಕು ಎಂದು ಆಂಕ್ಷೆ ಹೊಂದಿರುವ ಡಾ.ಮೋಹನ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement