ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ದೇಶವ್ಯಾಪಿ ಸುದ್ದಿಯಾಗಿದ್ದ ಶ್ರೀಕಾಂತ ಪೂಜಾರಿಗೆ ಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹುಬ್ಬಳ್ಳಿಯ ಸಬ್‌ ಜೈಲಿನಲ್ಲಿದ್ದ ಪೂಜಾರಿಯನ್ನು ಶನಿವಾರ ಬಿಡುಗಡೆ ಮಾಡಲಾಯಿತು. ಹೊರಗಡೆ ಕಾದು ನಿಂತಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶ್ರೀಕಾಂತ ಪೂಜಾಗೆ ಹೂಹಾರ ಹಾಕಿ ಶ್ರೀರಾಮನ ಭಾವಚಿತ್ರ ನೀಡಿ ಸ್ವಾಗತಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಮಾರ್ಕೆಟ್ ಗೆ ಕರೆದೊಯ್ಯುವ ನೆಪದಲ್ಲಿ ಪೊಲೀಸರು ಠಾಣೆಗೆ (police station) ಒಯ್ದರು ಎಂದು ಹೇಳಿದ್ದಾರೆ. ನನ್ನ ಬಂಧನಕ್ಕೆ ಅವರಲ್ಲಿ ವಾರಂಟ್, ಸಮನ್ಸ್ ಯಾವುದೂ ಇರಲಿಲ್ಲ ಎಂದು ತಿಳಿಸಿದ್ದಾರೆ.
ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕ ಅಶೋಕ ಕಾಟವೆ, ಪಾಲಿಕೆ ಸದಸ್ಯರು, ಬಿಜೆಪಿ, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement