ಅಯೋಧ್ಯಾ ರಾಮಮಂದಿರ ಪ್ರತಿಷ್ಠಾಪನೆ ; ಜ.22ಕ್ಕೆ ರಾಜ್ಯದ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆಗೆ ಸೂಚನೆ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಿಮಿತ್ತ ಜನವರಿ 22ರಂದು ರಾಜ್ಯದ ಎಲ್ಲ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜನವರಿ 22ರಂದು ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲು ಸೂಚಿಸಿದ್ದಾರೆ.
ರಾಜ್ಯದ ಮುಜರಾಯಿ ಇಲಾಖೆ ಅಡಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಜ.22ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಸಮಯವಾದ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ(12:29:8 ರಿಂದ 12:30:32) ಏಕಕಾಲದಲ್ಲಿ ಮಹಾಮಂಗಳಾರತಿ ನಡೆಸಿ, ದೇಶ, ರಾಜ್ಯದ ಎಲ್ಲರಿಗೂ ಶ್ರೀ ರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement