ಕೋಮುಗಲಭೆಗೆ ಯತ್ನ ಆರೋಪ : ಪುನೀತ್ ಕೆರೆಹಳ್ಳಿ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪುನೀತ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಸೈಬರ್ ಕ್ರೈಂಗೆ ದೂರು ನೀಡಲಾಗಿದೆ.
ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪುನೀತ್​ ಕೆರೆಹಳ್ಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೂರು ದಾಖಲಿಸಿದೆ.

ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕೆಂದು ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಹಾಕಿ ಕೋಮುಗಲಭೆಗೆ ಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ.
ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ಹಾಕಿರುವ ನಂಬರ್ ಅನ್ನು ಟ್ರೂ ಕಾಲರ್​ನಲ್ಲಿ ಚೆಕ್ ಮಾಡಿದಾಗ ಪುನೀತ್ ಕೆರೆಹಳ್ಳಿ ನಂಬರ್ ಎಂದ ತಿಳಿದು ಬಂದಿದೆ. ದ್ವೇಷ ಸೃಷ್ಟಿಸುವ ಈತನನ್ನ ಬಂಧಿಸಬೇಕು. ಯಾವ ಬಿಜೆಪಿ ಮುಖಂಡ ಈತನಿಗೆ ಸುಪಾರಿ ಕೊಟ್ಟಿದ್ದಾನೆಂದು ತನಿಖೆ ಆಗಬೇಕು ಎಂದು ಕಾಂಗ್ರೆಸ್ ದೂರು ನೀಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement