ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ : 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಗುಜರಾತ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಲ್ಲಿ 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ  ಮತ್ತು ಆಕೆಯ ಕುಟುಂಬವನ್ನು ಏಳು ಜನರನ್ನು ಹತ್ಯೆ ಮಾಡಿದ 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ  ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ಅಂತಹ ನಿರ್ಧಾರವನ್ನು ತೆಗೆದುಕೊಳ್ಳಲು ಗುಜರಾತ್‌ ಸರ್ಕಾರ “ಸಮರ್ಥವಾಗಿಲ್ಲ” ಎಂದು ಅದು ಹೇಳಿದೆ. ಅಪರಾಧಿಗಳು ಜೈಲಿಗೆ ಪುನಃ ಹೋಗುತ್ತಾರೆ ಮತ್ತು ಅವರು ಎರಡು ವಾರಗಳಲ್ಲಿ ಶರಣಾಗಬೇಕು ಎಂದು ಕೋರ್ಟ್‌ ಹೇಳಿದೆ.
2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಹೇಳಿದೆ.

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪಲಾಯನ ಮಾಡುತ್ತಿದ್ದ ಬಿಲ್ಕಿಸ್‌ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನೊ, ಐದು ತಿಂಗಳ ಗರ್ಭಿಣಿಯೂ ಆಗಿದ್ದರು. ಅವರ ಮೂರು ವರ್ಷದ ಮಗಳೂ ಸೇರಿದಂತೆ 7 ಮಂದಿಯನ್ನ ಹತ್ಯೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಭಾಗವತ ಕಥಾ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ್ದ ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರ ಮಾಡಿದ್ದ ಮತ್ತೊಬ್ಬ ಬಾಲಕ...!

ಅಪರಾಧಿಗಳ ಶೀಘ್ರ ಬಿಡುಗಡೆ ಮಾಡುವ ಕುರಿತು ಆದೇಶವನ್ನು ಹೊರಡಿಸಲು ಗುಜರಾತ್ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಪೀಠವು ಹೇಳಿದೆ, ಅಂತಹ ಆದೇಶಗಳನ್ನು ಜಾರಿಗೊಳಿಸಲು ಸೂಕ್ತವಾದ ಸರ್ಕಾರವು ಮಹಾರಾಷ್ಟ್ರವಾಗಿದೆ, ಯಾಕೆಂದರೆ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದೆ, ಗುಜರಾತ್ ನಲ್ಲಿ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
“ಅಪರಾಧಿಗೆ ಶಿಕ್ಷೆ ವಿಧಿಸಿದ ರಾಜ್ಯದ (ಮಹಾರಾಷ್ಟ್ರ) ಸರ್ಕಾರವು ಪರಿಹಾರ ನೀಡಲು ಸೂಕ್ತವಾದ ಸರ್ಕಾರವಾಗಿದೆ ಮತ್ತು ಅಪರಾಧ ನಡೆದ ರಾಜ್ಯದ (ಗುಜರಾತ್) ಸರ್ಕಾರವಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಅಪರಾಧಿಗಳಲ್ಲಿ ಒಬ್ಬನಾದ ರಾಧೇಶ್ಯಾಂ ವಾಸ್ತವ ಸಂಗತಿಗಳನ್ನು ನಿಗ್ರಹಿಸುವ ಮೂಲಕ ನ್ಯಾಯಾಲಯಕ್ಕೆ ವಂಚನೆ ಎಸಗಿದ್ದಕ್ಕಾಗಿ ಮತ್ತು ಮೇ 2022 ರಲ್ಲಿ ಉನ್ನತ ನ್ಯಾಯಾಲಯದಿಂದ ಅನುಕೂಲಕರವಾದ ಆದೇಶವನ್ನು ಪಡೆಯುವ ಮೂಲಕ ಅಂತಿಮವಾಗಿ ಎಲ್ಲಾ ಹನ್ನೊಂದು ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಕಾರಣವಾಗಿದ್ದಕ್ಕೆ ಬಲವಾಗಿ ತರಾಟೆಗೆ ತೆಗೆದುಕೊಂಡಿತು.
2022 ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಬಳಕೆಯಲ್ಲಿಲ್ಲದ ಕಾನೂನಿನ ಆಧಾರದ ಮೇಲೆ ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಿತು, ಇದು ಪ್ರತಿಪಕ್ಷಗಳು ಸೇರಿದಂತೆ ದೇಶಾದ್ಯಂತ ಖಂಡನೆ ಮತ್ತು ಆಕ್ರೋಶಕ್ಕೆ ಕಾರಣವಾಯಿತು.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement