ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇ.ಡಿ. ದಾಳಿ

ಕೋಲಾರ : ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (Kochimul) ಕೋಚಿಮುಲ್ ಅಧ್ಯಕ್ಷ ಹಾಗೂ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಾಸಕ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿ ಸೇರಿದಂತೆ ಪರಿಶೀಲನೆ ನಡೆಸಿದ್ದಾರೆ. ಕೋಲಾರ-ಚಿಕ್ಕಮಗಳೂರು ಹಾಲು ಒಕ್ಕೂಟದಲ್ಲಿ (ಕೋಚಿಮುಲ್‌) ನಡೆದ ನೇಮಕಾತಿ ಅವ್ಯವಹಾರಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿ ಕೋಮ್ಮನಹಳ್ಳಿ ಗ್ರಾಮದಲ್ಲಿ ಶಾಸಕರ ನಿವಾಸಕ್ಕೆ ಬೆಳಿಗ್ಗೆ 6 ಗಂಟೆಗೆ ಸುಮಾರಿಗೆ ಇ.ಡಿ ತಂಡ ಆಗಮಿಸಿ ಮನೆಯಲ್ಲಿರುವ ಮಹತ್ವ ದಾಖಲೆ ಪರಿಶೀಲನೆ ನಡೆಸುತ್ತಿದೆ. ಮನೆಯ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಶಾಸಕ ನಂಜೇಗೌಡ ಮನೆ, ಶಾಸಕರ ಪಿಎ ಹರೀಶ ಮನೆ, ನಂಜುಂಡೇಶ್ವರ ಸ್ಟೋನ್ ಜಲ್ಲಿ ಕ್ರಷರ್, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್, ಕೋಚಿಮುಲ್​​ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್​ಮೂರ್ತಿ ನಿವಾಸ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಕೋಚಿಮುಲ್ ನೇಮಕಾತಿ ಹಗರಣ ನಡೆದಿತ್ತು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು ನಿವಾಸದ ಮೇಲೆ ಐಟಿ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement