ಹೊಸನಗರ : ಮಂಗನ ಕಾಯಿಲೆಗೆ 18 ವರ್ಷದ ಯುವತಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡ ಅವರನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಯುವತಿಗೆ ಮೊದಲ ಬಾರಿ ನೆಗೆಟಿವ್ ಬಂದುತ್ತು, ಎರಡನೇ ಬಾರಿ ಪಾಸಿಟಿವ್ ಬಂದಿದೆ. ನಂತರ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಗ್ಗೆ ಯುವತಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ. ಶಿವಮೊಗ್ಗದಲ್ಲಿ ಈವರೆಗೆ ಮೂರು ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಅದರಲ್ಲಿ ಒಬ್ಬರು (ಯುವತಿ) ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement