ಯಶ್‌ ನೋಡಲು ಬಂದಾಗ ಬೈಕ್‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯಶ್ ಅಭಿಮಾನಿ ಸಾವು

ಗದಗ : ನಟ ಯಶ್ ಜನ್ಮದಿನಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ನಂತರ ಮೃತ ಕುಟುಂಬದವರಿಗೆ ಸಾಂತ್ವನ ಹೇಳಲು ಬಂದಿದ್ದ ನಟ ಯಶ್‌ ಅವರ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಸಾವಿಗೀಡಾಗಿದ್ದಾನೆ.
ವಿದ್ಯುತ್‌ ಸ್ಪರ್ಶದ ಘಟನೆಯಲ್ಲಿ ಗಾಯಗೊಂಡಿದ್ದವರ ಆರೋಗ್ಯ ವಿಚಾರಿಸಲೆಂದು ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ. ಮೃತನನ್ನು ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (22) ಎಂದು ಗುರುತಿಸಲಾಗಿದೆ.

ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು (ಪೊಲೀಸ್ ಬೆಂಗಾವಲು ವಾಹನ) ವಾಹನಕ್ಕೆ ನಿಖಿಲ್‌ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಆತನನ್ನು ಕೂಡಲೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ವಿದ್ಯುತ್ ಶಾಕ್ ನಿಂದ ಮೂವರು ಅಭಿಮಾನಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ನಟ ಯಶ್‌ ಮೃತರ ಮನೆಗೆ ಭೇಟಿ ನೀಡಿದ್ದರು. ಅದಾದ ನಂತರ ನಟ ಯಶ್ ಗಾಯಾಳುಗಳನ್ನು ನೋಡಲು ಗದಗ ಜಿಮ್ಸ್‌ ಆಸ್ಪತ್ರೆಗೆ ತೆರಳಿದ್ದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಶ್ ನೋಡಲು ವೇಗವಾಗಿ ಬಂದ ಅಭಿಮಾನಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement