ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಇವೆಲ್ಲ ಕೇವಲ ಊಹಾಪೋಹ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ
ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನೇ ಕೇಳಿ ಎಂದು ಹೇಳಿದರು.

ಇದೆಲ್ಲ ಕೇವಲ ಉಹಾಪೋಹವಾಗಿದ್ದು ಚುನಾವಣೆ ಸಂದರ್ಭದಲ್ಲಿ ಇಂತಹ ಚರ್ಚೆಗಳು ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆಗೆ, ಜನರ ಸಮಸ್ಯೆಗಳ ಕಡೆಗೆ ಗಮನ ಕೊಡಬೇಕು. ನಾವು ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ಇಂತಹದಕ್ಕೆ ಅವಕಾಶ ಕೊಡಬಾರದು’ ಎಂದರು.
ಕೆಲವು ದಿನಗಳಿಂದ ಮತ್ತೆ ಮೂವರು ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತು ಹಲವು ಕಾಂಗ್ರೆಸ್‌ ನಾಯಕರ ಹೇಳಿಕೆ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಈ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಬುಧವಾರ ಸಭೆ ಕರೆಯಲಾಗಿದೆ. ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆಯೂ ಸಭೆ ನಡೆಯಲಿದೆ ಎಂದು ಹೇಳಿದರು.
ಸಭೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಹಾಕಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಗುವುದು. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದೆ. ಅದಕ್ಕೆ ಬದ್ಧರಾಗಿ ಎಲ್ಲರೂ ಒಂದಾಗಿ ಕೆಲಸ ನಿರ್ವಹಿಸುತ್ತೇವೆ. ಬುಧವಾರ ದೆಹಲಿಯಲ್ಲಿ ಅನೇಕ ಘಟಕಗಳ ಸಭೆ ಕರೆಯಲಾಗಿದೆ. ಎಲ್ಲ ಮತಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ...!

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement