ಬೆಳಗಾವಿ ಡಿಸಿ ಕಚೇರಿಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ ಕೊಪ್ಪದ (23 ವರ್ಷ) ಎಂಬ ಯುವಕ ಬುಧವಾರ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕಚೇರಿಯಲ್ಲಿ ಇಲ್ಲದ ವೇಳೆ ಈತ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಕುಡಿಯುವ ನೀರಿನ ಬಾಟಲಿಯೊಳಗೆ ವಿಷ ಹಾಕಿಕೊಂಡು ಬಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಕೂಡಲೇ ಪೊಲೀಸರು ಈತನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂಬ ಮಾಹಿತಿ ಲಭ್ಯವಾಗಿಲ್ಲ. ಮಾರ್ಕೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣದ ತನಿಖಾ ತಂಡದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ

ನಿಮ್ಮ ಕಾಮೆಂಟ್ ಬರೆಯಿರಿ

advertisement