‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ.
ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ಪತ್ರವು ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಸಮಾರಂಭವನ್ನು ಆರ್‌ ಎಸ್‌ ಎಸ್‌ ಹಾಗೂ ಬಿಜೆಪಿ (RSS/BJP) ಕಾರ್ಯಕ್ರಮವಾಗಿದೆ ಎಂದು ಹೇಳಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು. ಆದಾಗ್ಯೂ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ದೇವಸ್ಥಾನದ ರಾಜಕೀಕರಣಗೊಳಿಸಲು ಯೋಜನೆಯನ್ನು ರೂಪಿಸುತ್ತಿವೆ ಎಂದು ಕಾಂಗ್ರೆಸ್‌ ಪಕ್ಷವು ಆರೋಪಿಸಿದೆ.

“ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ, ಧರ್ಮವು ವೈಯಕ್ತಿಕ ವಿಷಯವಾಗಿದೆ, ಆದರೆ ಆರ್‌ಎಸ್‌ಎಸ್/ಬಿಜೆಪಿ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಬಹಳ ಹಿಂದಿನಿಂದಲೂ ಮಾಡುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆ ಕಾರ್ಯಕ್ರಮವನ್ನು ಚುನಾವಣಾ ಲಾಭಕ್ಕಾಗಿ ನಿಸ್ಸಂಶಯವಾಗಿ ಮೊದಲೇ ಮಾಡುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.
“2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಾಗಿರುವಾಗ ಮತ್ತು ಭಗವಾನ್ ರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವ ಸಂದರ್ಭದಲ್ಲಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರೆಸ್ಸೆಸ್/ಬಿಜೆಪಿ ಕಾರ್ಯಕ್ರಮಕ್ಕೆ ನೀಡಿದ್ದ ಆಹ್ವಾನವನ್ನು ʼಗೌರವಯುತʼವಾಗಿ ನಿರಾಕರಿಸಿದ್ದಾರೆ” ಎಂದು ಅದು ಸೇರಿಸಿದೆ.
ಬಹುದೊಡ್ಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವ ಕಾಂಗ್ರೆಸ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಮ ಲಲ್ಲಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್‌ ಪಕ್ಷವು ಬಯಸದಿದ್ದರೆ ಅದು ಅವರ ಆಯ್ಕೆಯಾಗಿದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಲ್ಮೆಟ್ ಹಾಕಿಕೊಂಡು ಕೋಟಿ ಬೆಲೆ ಬಾಳುವ ʼಆಡಿʼ ಕಾರ್‌ ಓಡಿಸ್ತಾರೆ ಈ ವ್ಯಕ್ತಿ : ಕಾರಣ ಕೇಳಿದ್ರೆ....ಹೀಗೂ ಉಂಟೆ

ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ ರೈ ಅವರು ರಾಮಲಲ್ಲಾ ದರ್ಶನಕ್ಕಾಗಿ ಜನವರಿ 15 ರಂದು ಅಯೋಧ್ಯೆಗೆ ಭೇಟಿ ನೀಡಿ ಸರಯೂ ನದಿಯಲ್ಲಿ ಪುಣ್ಯಸ್ನಾನ ಮಾಡುವುದಾಗಿ ತಿಳಿಸಿದ್ದಾರೆ. ಆದರೆ, ಪಟ್ಟಾಭಿಷೇಕ ಸಮಾರಂಭಕ್ಕೆ ತನಗೆ ಆಹ್ವಾನ ನೀಡಿಲ್ಲ ಎಂದು ರೈ ಹೇಳಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು ಮತ್ತು ಇತರರು ಸೇರಿದಂತೆ 6,000 ಕ್ಕೂ ಹೆಚ್ಚು ಜನರು ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ನೇಪಾಳದ ಜನಕ್‌ಪುರದಲ್ಲಿರುವ ಸೀತಾ ಜನ್ಮಸ್ಥಳದಿಂದ ಶ್ರೀರಾಮನಿಗೆ ಬೆಳ್ಳಿ ಪಾದುಕೆಗಳು, ಆಭರಣಗಳು ಮತ್ತು ಬಟ್ಟೆಗಳು ಸೇರಿದಂತೆ 3,000 ಕ್ಕೂ ಹೆಚ್ಚು ಉಡುಗೊರೆಗಳು ಅಯೋಧ್ಯೆಗೆ ಆಗಮಿಸಿವೆ. 3,610 ಕೆಜಿ ತೂಕ ಮತ್ತು ಸುಮಾರು 3.5 ಅಡಿ ಅಗಲವಿರುವ 108 ಅಡಿ ಉದ್ದದ ಅಗರಬತ್ತಿಯನ್ನು ಆರು ತಿಂಗಳ ಅವಧಿಯಲ್ಲಿ ಗುಜರಾತ್‌ನ ವಡೋದರಾದಲ್ಲಿ ಸಿದ್ಧಪಡಿಸಲಾಗಿದೆ.
ಲಕ್ನೋ ಮೂಲದ ತರಕಾರಿ ಮಾರಾಟಗಾರರೊಬ್ಬರು ವಿಶೇಷವಾಗಿ ಎಂಟು ದೇಶಗಳಲ್ಲಿ ಒಂದೇ ಸಮಯದಲ್ಲಿ ಸಮಯವನ್ನು ಸೂಚಿಸುವ ಗಡಿಯಾರವನ್ನು ವಿನ್ಯಾಸಗೊಳಿಸಿದ್ದಾರೆ. ಮಥುರಾದ ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಸ್ಥಾನವು 200 ಕಿಲೋಗ್ರಾಂಗಳಷ್ಟು ಲಡ್ಡುವನ್ನು ಅಯೋಧ್ಯೆಗೆ ಕಳುಹಿಸಲು ಸಿದ್ಧತೆ ನಡೆಸಿದೆ. ಹೆಚ್ಚುವರಿಯಾಗಿ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ದೊಡ್ಡ ದಿನದಂದು ಭಕ್ತರಿಗೆ ವಿತರಿಸಲು ಒಂದು ಲಕ್ಷ ಲಡ್ಡುಗಳನ್ನು ಕಳುಹಿಸುವುದಾಗಿ ಘೋಷಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬಿಎಸ್‌ಇ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸ್ಟಂಪ್ಡ್‌ ಔಟ್‌ ಮಾಡಿದ ಬ್ರೋಕರ್‌ : ವೀಕ್ಷಿಸಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement