ಬೆಳಗಾವಿ : ನಿಂತಿದ್ದ ಲಾರಿಗೆ ಗುದ್ದಿದ ಕಾರು, ಯುವ ವೈದ್ಯ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ರಸ್ತೆ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಯುವ ವೈದ್ಯ ಮೃತಪಟ್ಟಿದ್ದು, ಇಬ್ಬರು ಎಂಬಿಎ ಪದವೀಧರರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯಲ್ಲಿ ನಡೆದಿದೆ.
ನಗರದ ಯಡಿಯೂರಪ್ಪ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಯುವ ವೈದ್ಯ ಸೌರಭ ಕಾಂಬಳೆ (25)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಮಖಂಡಿಯ ಗಿರೀಶ ಕರೆಮ್ಮನವರ(25) ಮತ್ತು ಚೇತನ ಧರಿಗೌಡರ(25) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರೂ ರಾತ್ರಿ ಪಾರ್ಟಿ ಮುಗಿಸಿ ವಾಪಸ್‌ ಆಗುವಾಗ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ರಭಸವಾಗಿ ಬಂದು ಗುದ್ದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಾಲ್ಕೈದು ಸಲ ಪಲ್ಟಿ ಹೊಡೆದಿದೆ. ಸ್ಥಳಕ್ಕೆ ಬೆಳಗಾವಿ ದಕ್ಷಿಣ ಸಂಚಾರ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

5 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement