ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ : ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಸಂಕೇಶ್ವರ : ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ ಶಾಲಾ ಬಾಲಕರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾದ ಘಟನೆ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯ ಹಾಲು ನೀಡಲಾಗಿತ್ತು. ಆದರೆ ಹಾಲಿನಲ್ಲಿ ಹಲ್ಲಿ ಬಿದ್ದಿರುವ ವಿಷಯ ಮಕ್ಕಳು ಹಾಲು ಕುಡಿದ ನಂತರ ಗೊತ್ತಾಗಿತ್ತು. ಬಳಿಕ ಮುಂಜಾಗ್ರತಾ ಕ್ರಮವಾಗಿ ಎರಡು ಅಂಬ್ಯುಲನ್ಸ್ ಹಾಗೂ ಕೆಲವು ಖಾಸಗಿ ವಾಹನಗಳ ಮೂಲಕ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ಸುದ್ದಿ ತಿಳಿದ ಬಳಿಕ ಮಕ್ಕಳ ಪಾಲಕರು ಗಾಬರಿಗೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಸುದ್ದಿ ತಿಳಿದ ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement