ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಘುಮೂರ್ತಿ

ಚಿತ್ರದುರ್ಗ: ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸುವುದು ಬೇಡ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿದ್ದು, ಇದೇ ಜನವರಿ ತಿಂಗಳಲ್ಲೇ ಪ್ರಕಟವಾಗಲಿದೆ ಎಂಬ ವರದಿಯ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕಾಂಗ್ರೆಸ್‌ ಶಾಸಕ ಟಿ.ರಘುಮೂರ್ತಿ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷವು ನನಗೆ 3 ಬಾರಿ ಸ್ಪರ್ಧೆಗೆ ಅವಕಾಶ ನೀಡಿದೆ. ವರಿಷ್ಠರಿಗೆ, ಕಾರ್ಯಕರ್ತರಿಗೆ ನಾನು ಋಣಿಯಾಗಿರುವೆ. ಸರ್ಕಾರದಿಂದ ಸಹಕಾರ ನಿರೀಕ್ಷಿಸುವೆ, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ. ಯಾವುದೇ ಸಮಯದಲ್ಲಿಯೂ ಪಕ್ಷಕ್ಕೆ ಮುಜುಗರ ಆಗದ ರೀತಿ ನಡೆದುಕೊಳ್ಳುವೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಕಾಂಗ್ರೆಸ್ ಶಾಸಕರು ಮತ್ತು ಮುಖಂಡರಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ಮಧ್ಯೆ ಶಾಸಕ ರಘುಮೂರ್ತಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ತನಗೆ ಬೇಡ ಎಂದು ಪತ್ರ ಬರೆದಿರುವುದು ಗಮನ ಸೆಳೆದಿದೆ.
ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಹಿರಿಯ ನಾಯಕರ ಜತೆ ಚರ್ಚಿಸಿ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳ ಅಂತ್ಯಕ್ಕೆ ಅಧಿಕೃತ ಪಟ್ಟಿ ಪ್ರಕಟವಾಗವಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement