ನಾವೂ ಶ್ರೀರಾಮನ ಭಕ್ತರೆ, ಅಯೋಧ್ಯೆಗೆ ನಾನೂ ಹೋಗಿ ಬರ್ತೇನೆ…ಆದರೆ ಜನವರಿ 22ರ ನಂತರ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ : ಜನವರಿ 22ರ ನಂತರ ನಾವು ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಅಯೋಧ್ಯೆ ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ. ದೇವರನ್ನು ರಾಜಕೀಯ ಉದ್ದೇಶಕ್ಕಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ. ಅಯೋಧ್ಯೆಗೆ ನಾನೂ ಹೋಗುತ್ತೇನೆ. ಜನವರಿ 22ರ ನಂತರ ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಹೇಳಿದರು.
ನಾವು ಶ್ರೀರಾಮಚಂದ್ರನ ಭಕ್ತರು. ಶ್ರೀರಾಮನ ಪೂಜೆ ಮಾಡುವುದರಲ್ಲಿ ನಾವು ಹಿಂದೆ ಬಿದ್ದಿಲ್ಲ. ಜನವರಿ 22ಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಎಲ್ಲಾ ರಾಮಮಂದಿರಗಳಲ್ಲಿ ಪೂಜೆ ಮಾಡಲಿದ್ದಾರೆ ಎಂದರು. ನಾವು ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮನನ್ನಲ್ಲ ಎಂದು ಸ್ಪಷ್ಟಪಡಿಸಿದರು.

ಮೂರು ಡಿಸಿಎಂ ಕುರಿತು ಚರ್ಚಿಸುವುದಿಲ್ಲ
ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಟಿಸುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು , ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ನಾಯಕರು ಹತಾಶರಾಗಿ ಟೀಕಿಸುತ್ತಿದ್ದಾರೆ. ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ಅವರಿಗೆ ನುಂಗಲಾರದ ತುತ್ತಾಗಿವೆ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement