ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದ್ದಾರೆ.
ಸಚಿವ ಕೆಎನ್​ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದು, ಅನವಶ್ಯಕವಾಗಿ ಉಪಮುಖ್ಯಮಂತ್ರಿ ವಿಚಾರದ ಬಗ್ಗೆ ಮಾತನಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಕಾಂಗ್ರೆಸ್ ಪಕ್ಷ ಇಂತಹ ಚಟುವಟಿಕೆಗಳನ್ನು ಸಹಿಸಬಾರದು. ಸಂಪುಟದಿಂದ ಸಚಿವ ಕೆ.ಎನ್.ರಾಜಣ್ಣ ಾವರನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಕೆ.ಎನ್. ರಾಜಣ್ಣ, ಸಹಕಾರ ಸಚಿವರು ಆಗಾಗ ಮೂವರು ಉಪಮುಖ್ಯಮಂತ್ರಿಗಳ ಅವಶ್ಯಕತೆ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದು ಇದು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು   ಕಾಂಗ್ರೆಸ್​​ನ 10 ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement