ಮತ್ತೆ ವಿವಾದಕ್ಕೆ ಕಾರಣವಾದ ಅನಂತಕುಮಾರ ಹೆಗಡೆ ಹೇಳಿಕೆ : ಸಿದ್ದರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ

ಕುಮಟಾ : ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿಯೇ ಸಂಬೋಧಿಸಿ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಟ್ಕಳ, ಶಿರಸಿ ಹಾಗೂ ಶ್ರೀರಂಗಪಟ್ಟಣದಲ್ಲಿರುವ ಮಸೀದಿಗಳು ಈ ಹಿಂದೆ ದೇವಸ್ಥಾನಗಳೇ ಆಗಿದ್ದವು ಎಂದು ಅವರು ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನು ಬೆದರಿಕೆ ಎಂದು ಬೇಕಾದರೂ ತಿಳಿದುಕೊಳ್ಳಲಿ. ಅದನ್ನು ಕಿತ್ತು ಹಾಕುವ ತನಕ ಹಿಂದೂ ಸಮಾಜ ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ.
ಭಟ್ಕಳದ ಚಿನ್ನದಪಳ್ಳಿಯ ಮಸೀದಿ ಹಿಂದೂ ದೇವಸ್ಥಾನವಾಗಿತ್ತು. ಶಿರಸಿಯ ಸಿಪಿ ಬಜಾರ್‌ನಲ್ಲಿರುವ ದೊಡ್ಡ ಮಸೀದಿ ಅದು ವಿಜಯ ವಿಠ್ಠಲ ದೇವಸ್ಥಾನವಾಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು, ಇದೇ ತರಹ ದೇಶದ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡ ಸಂಕೇತಗಳಿವೆ. ಅದನ್ನು ಕಿತ್ತು ಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಇದು ಅನಂತಕುಮಾರ ಹೆಗಡೆ ತೀರ್ಮಾನವಲ್ಲ, ಹಿಂದೂ ಸಮಾಜದ ತೀರ್ಮಾನ ಎಂದು ಹೇಳಿದ್ದಾರೆ.

ಇಡೀ ಹಿಂದೂ ಸಮಾಜವನ್ನು ಜಾತಿ, ಪ್ರಾದೇಶಿಕ, ಭಾಷೆ ಹೆಸರಿನಲ್ಲಿ ಒಡೆದರು. ಮೂರ್ಖರಾಮಯ್ಯನಂತವರು (ಸಿದ್ಧರಾಮಯ್ಯ) ಇನ್ನೂ ಒಡೆಯುತ್ತಲೇ ಇದ್ದಾರೆ. ಆದರೂ ಇಂದು ಹಿಂದೂ ಸಮಾಜ ಒಟ್ಟಾಗಿ ನಿಂತುಕೊಂಡಿದೆ, ಹೊಸ ಗೆಲುವನ್ನು ಮುಂದಿನ ಶತಮಾನದಲ್ಲಿ ಕಾಣುವಂತಾಗಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ. ಅದು ರಾಜಕಾರಣಕ್ಕೋಸ್ಕರ ಕೂಗುತ್ತಿದೆಯಷ್ಟೆ. ನಮ್ಮ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅಲ್ಪಸಂಖ್ಯಾತರ ಓಟಿಗೆ ಹರಾಜಾಗಿ ಹೋಗಿರುವ ಮಾನಸಿಕತೆಗೆ ನಮ್ಮ ವಿರೋಧ. ರಾಜಕೀಯಕ್ಕೆ ನಮ್ಮ ವಿರೋಧವಿಲ್ಲ, ಪ್ರಜಾಪ್ರಭುತ್ವದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ, ಒಂದು ಪಕ್ಷ ಅಧಿಕಾರದಿಂದ ಹೋಗುತ್ತದೆ, ಅದು ಸ್ವಾಭಾವಿಕ. ಯಾರೂ ಕಾಯಂ ಆಗಿ ಅಧಿಕಾರದಲ್ಲಿ ಇರುವುದಿಲ್ಲ, ಆದರೆ, ಗತಿಗೆಟ್ಟ ಮಾನಸಿಕತೆಗೆ ನಮ್ಮ ವಿರೋಧವಿದೆ ಎಂದು ಹೇಳಿದರು.
ರಾಮಜನ್ಮ ಭೂಮಿ ಆಹ್ವಾನ ಪತ್ರಿಕೆ ನಮಗೆ ಬಂದಿಲ್ಲ ಎಂದು ಹೇಳಿದ್ದರು. ಆಮೇಲೆ ಬಂದರೂ ನಾವು ಹೋಗುವುದಿಲ್ಲ ಎಂದರು. ಆಮೇಲೆ ಹೋಗುತ್ತೇನೆ ಎಂದು ಹೇಳುತ್ತಾರೆ. ಈಗ ನೀನು ಬರ್ಲಿ ಬಿಡಲಿ, ರಾಮಜನ್ಮಭೂಮಿ ನಿಲ್ಲುವುದಿಲ್ಲ ಮಗನೇ.. ಇದು ಹಿಂದೂ ಸಮಾಜದ ತಾಕತ್ತು, ಕೇವಲ 8 ದಿನಗಳಲ್ಲಿ ಇವರ ಧ್ವನಿ ಬದಲಾಯ್ತು. ಇದು ಹಿಂದೂ ಸಮಾಜದ ಧಮ್ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement