ರಾಮ ಮಂದಿರ ನಿರ್ಮಾಣ: ಪ್ರಧಾನಿ ಮೋದಿಯನ್ನು ಹೊಗಳಿದ ಮತ್ತೊಬ್ಬ ಹಿರಿಯ ಕಾಂಗ್ರೆಸ್‌ ನಾಯಕಿ

ಶಿಮ್ಲಾ : ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ ಒಂದೆರಡು ದಿನಗಳ ನಂತರ, ಪಕ್ಷದ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.
ಎಕ್ಸ್‌ನಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, “ರಾಮ ಮಂದಿರವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮವು ನಿಜವಾಗಿಯೂ ಶ್ಲಾಘನೀಯ” ಎಂದು ಸಿಂಗ್ ಹೇಳುವುದನ್ನು ಕೇಳಬಹುದಾಗಿದೆ. ತಮ್ಮ ದಿವಂಗತ ಪತಿ ಮತ್ತು ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ದೇವರಲ್ಲಿ ಅಪಾರ ನಂಬಿಕೆ ಹೊಂದಿದ್ದರು ಮತ್ತು ರಾಜ್ಯದಲ್ಲಿ ಹಲವಾರು ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಹಿಮಾಚಲ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರು, ತಾನು ಮತ್ತು ತನ್ನ ಮಗ ವಿಕ್ರಮಾದಿತ್ಯ ಸಿಂಗ್ ಜಂಟಿ ಆಹ್ವಾನವನ್ನು ಸ್ವೀಕರಿಸಿದ್ದೇವೆ ಮತ್ತು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

ವೀಡಿಯೊದಲ್ಲಿ ಅವರು, ಹಿಮಾಚಲ ಪ್ರದೇಶದ ಒಟ್ಟು ಜನಸಂಖ್ಯೆಯ 98 ಪ್ರತಿಶತದಷ್ಟು ಹಿಂದೂಗಳು ಇದ್ದಾರೆ ಮತ್ತು “ನಾವೆಲ್ಲರೂ ಭಗವಾನ್ ರಾಮನಲ್ಲಿ ನಂಬಿಕೆ ಹೊಂದಿದ್ದೇವೆ ಮತ್ತು ನಮ್ಮ ಧರ್ಮವು ಪ್ರಗತಿಯಾಗಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನ ಉನ್ನತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿದ್ದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ, ಬಿಜೆಪಿ ಚುನಾವಣಾ ಲಾಭಕ್ಕಾಗಿ ಇದನ್ನು “ರಾಜಕೀಯ ಯೋಜನೆ”ಯನ್ನಾಗಿ ಮಾಡಿದೆ ಎಂದು ಪಕ್ಷ ಆರೋಪಿಸಿದೆ. ಧರ್ಮ “ವೈಯಕ್ತಿಕ ವಿಷಯ” ಆಗಿದೆ ಎಂದು ಹೇಳಿದೆ.

ಜನವರಿ 8 ರಂದು ಪ್ರತಿಭಾ ಸಿಂಗ್‌ ಪುತ್ರ ಹಾಗೂ ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.
“ಇದು ರಾಜಕೀಯ ವಿಷಯವಲ್ಲ ಮತ್ತು ಹಿಮಾಚಲ ಪ್ರದೇಶದ ಕೆಲವೇ ಆಹ್ವಾನಿತರಲ್ಲಿ ನಾನೊಬ್ಬನಾಗಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ ಮತ್ತು ನನಗೆ ಮತ್ತು ನನ್ನ ಕುಟುಂಬಕ್ಕೆ ಈ ಗೌರವವನ್ನು ನೀಡಿದ್ದಕ್ಕೆ ವಿಶ್ವ ಹಿಂದೂ ಪರಿಷತ್ತಿಗೆ ಧನ್ಯವಾದಗಳು” ಎಂದು ಸಿಂಗ್ ಹೇಳಿದ್ದಾರೆ.
ಒಂದು ದಿನದ ನಂತರ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಅಯೋಧ್ಯೆಗೆ ಹೋಗಲು ಯಾವುದೇ ಆಹ್ವಾನದ ಅಗತ್ಯವಿಲ್ಲ ಎಂದು ಹೇಳಿದರು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನಂತರ ನಾವು ಅಯೋಧ್ಯೆಗೆ ಹೋಗುತ್ತೇವೆ ಎಂದು ಅವರು ಹೇಳಿದ್ದರು.

ಪ್ರಮುಖ ಸುದ್ದಿ :-   ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement