ಕಾಂಗ್ರೆಸ್ಸಿಗೆ ಗುಡ್‌ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ : ಇಂದೇ ಸಿಎಂ ಏಕನಾಥ ಶಿಂಧೆ ಶಿವಸೇನೆ ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ನಿರೀಕ್ಷೆಯಿದೆ.
ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

2004 ಮತ್ತು 2009 ರಲ್ಲಿ ಮುಂಬೈ ದಕ್ಷಿಣ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ಮುರಳಿ ದೇವೋರಾ ಅವರ ಪುತ್ರ ಮಿಲಿಂದ್‌ ದೇವೋರಾ ಅವರು ಗೆದ್ದಿದ್ದರು. ಅವರು 2014 ಮತ್ತು 2019 ರ ನಂತರದ ಚುನಾವಣೆಯಲ್ಲಿ ಶಿವಸೇನಾ (ಅವಿಭಜಿತ) ನಾಯಕ ಅರವಿಂದ ಸಾವಂತ್ ವಿರುದ್ಧ ಸೋಲನುಭವಿಸಿದ್ದರು. ಎರಡನೇ ಸ್ಥಾನ ಪಡೆದಿದ್ದರು. ಮುಂಬೈ ದಕ್ಷಿಣ ಕ್ಷೇತ್ರವನ್ನು ಉದ್ಧವ್ ಠಾಕ್ರೆ ಬಣ ಗೆದ್ದಿರುವ ಬಗ್ಗೆ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 2014ರ ಮೊದಲು ದಿಯೋರಾ ಪ್ರತಿನಿಧಿಸುತ್ತಿದ್ದ ಮುಂಬೈ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರತಿಪಾದನೆ ಮಾಡಿತ್ತು, ಇದು ಮಿಲಿಂದ್‌ ದಿಯೋರಾಗೆ ಇಷ್ಟವಾಗಲಿಲ್ಲ. ಯಾಕೆಂದರೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ವಿರೋಧ ಪಕ್ಷದ ಮೈತ್ರಿಕೂಟದ ಒಂದು ಭಾಗವಾಗಿದೆ. ಈ ಬೆಳವಣಿಗೆಯಿಂದ ಅಸಮಾಧಾನಗೊಂಡಿದ್ದ ಅವರು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಪಕ್ಷದಿಂದ ಮಿಲಿಂದ್ ದಿಯೋರಾ ನಿರ್ಗಮನದ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಅವರ ತಂದೆ ಮುರಳಿ ದೇವ್ರಾ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದರು. ಆದರೆ ಯಾವಾಗಲೂ ಪಕ್ಷದ ಪರವಾಗಿ ಹೇಗೆ ನಿಂತರು ಎಂಬುದನ್ನು ನೆನಪಿಸಿಕೊಂಡಿದ್ದಾರೆ.
“ನಾನು ಮುರಳಿ ದೇವ್ರಾ ಅವರೊಂದಿಗಿನ ನನ್ನ ಸುದೀರ್ಘ ವರ್ಷಗಳ ಒಡನಾಟವನ್ನು ಬಹಳ ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ನಿಕಟ ಸ್ನೇಹಿತರನ್ನು ಹೊಂದಿದ್ದರು, ಆದರೆ ಯಾವಾಗಲೂ ಕಾಂಗ್ರೆಸ್ ಪಕ್ಷದ ಪರವಾಗಿ ನಿಲ್ಲುವ ಒಬ್ಬ ದೃಢ ಕಾಂಗ್ರೆಸ್ಸಿಗರಾಗಿದ್ದರು ಎಂದು ಅವರು X ನಲ್ಲಿ ಬರೆದಿದ್ದಾರೆ.
ಮಿಲಿಂದ್ ದಿಯೋರಾ ಕಾಂಗ್ರೆಸ್ ತೊರೆದು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement