ಬೆಂಗಳೂರು : ಚಾಕೊಲೇಟ್‌ ಪ್ಯಾಕ್‌ ನಲ್ಲಿ ಅಡಗಿಸಿಟ್ಟು ವಿಮಾನದಲ್ಲಿ ಒಯ್ಯುತ್ತಿದ್ದ 7.76 ಕೋಟಿ ರೂ. ಮೌಲ್ಯದ ವಜ್ರ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಅಕ್ರಮವಾಗಿ ಒಯ್ಯುತ್ತಿದ್ದ ಸುಮಾರು 7.76 ಕೋಟಿ ರೂ. ಮೌಲ್ಯದ 8,053 ಕ್ಯಾರೆಟ್‌ ತೂಕದ ವಜ್ರಗಳು, 4.62 ಲಕ್ಷ ರೂ. ಮೊತ್ತದ ಅಮೆರಿಕ ಡಾಲರ್‌ ಮತ್ತು ದಿರ್‌ಹಂ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ.
ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಪ್ರಯಾಣಿಕರನ್ನು ವೈಮಾನಿಕ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದು, ಅವರಿಬ್ಬರು ಚಿಕ್ಕಬಳ್ಳಾಪುರದವರು ಎಂದು ಹೇಳಲಾಗಿದೆ.

ಮುಂಬೈನಿಂದ ಬೆಂಗಳೂರಿಗೆ ವಜ್ರಗಳನ್ನು ತಂದಿದ್ದ ಈ ಇಬ್ಬರೂ ಅವುಗಳನ್ನು ಚಾಕೊಲೇಟ್‌ ಪ್ಯಾಕ್‌ನಲ್ಲಿ ಅಡಗಿಸಿ ದುಬೈಗೆ ಒಯ್ಯುತ್ತಿದ್ದರು ಎನ್ನಲಾಗಿದೆ. ವೈಮಾನಿಕ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ದೊರೆತಿತ್ತು. ಅಧಿಕಾರಿಗಳ ತಂಡವು ರನ್‌ ವೇ ಬೇಯಲ್ಲಿ ದುಬೈಗೆ ಹಾರಲು ಸಿದ್ಧವಾಗಿದ್ದ ವಿಮಾನದಲ್ಲಿ ತಪಾಸಣೆ ನಡೆಸಿದ ವೇಳೆ ಪ್ರಯಾಣಿಕರಿಬ್ಬರ ಬ್ಯಾಗ್‌ನಲ್ಲಿ ಚಾಕೊಲೇಟ್‌ ಪ್ಯಾಕ್‌ನಲ್ಲಿ ಅಡಗಿಸಿಟ್ಟಿದ್ದ ವಜ್ರಗಳು ಪತ್ತೆಯಾಗಿವೆ.

ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಹೈದರಾಬಾದ್‌ ವಿಮಾನ ನಿಲ್ದಾಣದಿಂದ ಕಳ್ಳ ಸಾಗಣೆ ಜಾಲದ ಮತ್ತಿಬ್ಬರು ಸದಸ್ಯರು ಇನ್ನಷ್ಟು ವಜ್ರಗಳನ್ನು ದುಬೈಗೆ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇ
ಅಧಿಕಾರಿಗಳು ಈ ಮಾಹಿತಿಯನ್ನು ತಕ್ಷಣವೇ ಹೈದರಾಬಾದ್‌ ಗುಪ್ತಚರ ನಿರ್ದೇಶನಾಲಯಕ್ಕೆ ರವಾನಿಸಿದ್ದಾರೆ. ಹೈದರಾಬಾದ್‌ ವಿಮಾನ ನಿಲ್ದಾಣದಲ್ಲಿಯೂ ಅಧಿಕಾರಿಗಳು ತಪಾಸಣೆ ನಡೆಸಿದಾಗ 6.03 ಕೋಟಿ ರೂ. ಮೌಲ್ಯದ ವಜ್ರಗಳು ಹಾಗೂ 9.83 ಲಕ್ಷ ರೂ. ಮೊತ್ತದ ಅಮೆರಿಕ ಡಾಲರ್‌ ಕರೆನ್ಸಿ ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಮೇ 13ರಿಂದ ಎರಡ್ಮೂರು ದಿನ ಜೋರು ಮಳೆ ಸಾಧ್ಯತೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement