ರಾಜತಾಂತ್ರಿಕ ಗದ್ದಲದ ನಡುವೆ ಮಾರ್ಚ್ 15ರೊಳಗೆ ತನ್ನ ಸೈನ್ಯ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಹೇಳಿದ ಮಾಲ್ಡೀವ್ಸ್

ನವದೆಹಲಿ: ಭಾರತ ಸರ್ಕಾರವು ಮಾರ್ಚ್ 15ಕ್ಕಿಂತ ಮೊದಲು ದ್ವೀಪಸಮೂಹ ರಾಷ್ಟ್ರವಾದ ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಪ್ರಸ್ತಾಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಲ್ಡೀವ್ಸ್‌ನ ಮೂವರು ಸಚಿವರು ಇತ್ತೀಚಿನ ಅವಹೇಳನಕಾರಿ ಹೇಳಿಕೆಗಳಿಂದ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಭಾರತವು ತನ್ನ ದೇಶದಲ್ಲಿರುವ ಮಿಲಿಟರಿಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದ್ದಾರೆ.
ನವೆಂಬರ್ 2023 ರಲ್ಲಿ, ಮಾಲ್ಡೀವ್ಸ್‌ನ ಹೊಸ ಅಧ್ಯಕ್ಷರಾಗಿ ಆಯ್ಕೆಯಾದ ಮುಯಿಝು, ಭಾರತದೊಂದಿಗಿನ ಬಾಂಧವ್ಯವನ್ನು ಕಡಿಮೆ ಮಾಡುವ ಮತ್ತು ಚೀನಾದೊಂದಿಗೆ ತನ್ನ ಸಂಬಂಧ ಹೆಚ್ಚಿಸಲು ಮುಂದಾಗಿದ್ದಾರೆ. ತಮ್ಮ ದೇಶದಲ್ಲಿ ನೆಲೆಸಿರುವ ತನ್ನ ಮಿಲಿಟರಿ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಭಾರತವನ್ನು ಅಧಿಕೃತವಾಗಿ ಹೇಳಿದ್ದಾರೆ.

ಹಿಂದಿನ ಮಾಲ್ಡೀವ್ಸ್ ಸರ್ಕಾರದ ಕೋರಿಕೆಯ ಮೇರೆಗೆ ಭಾರತವು ಮಾಲ್ಡೀವ್ಸ್‌ನಲ್ಲಿ ಹಲವಾರು ವರ್ಷಗಳಿಂದ ಸಣ್ಣ ಮಿಲಿಟರಿ ಉಪಸ್ಥಿತಿಯನ್ನು ಕಾಯ್ದುಕೊಂಡಿದೆ. ಇತ್ತೀಚಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಪ್ರಸ್ತುತ ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೇನಾ ಸಿಬ್ಬಂದಿ ಇದ್ದಾರೆ, ಪ್ರಾಥಮಿಕವಾಗಿ ಸಮುದ್ರ ಭದ್ರತೆ ಮತ್ತು ವಿಪತ್ತು ಪರಿಹಾರದಲ್ಲಿ ಸಹಾಯ ಮಾಡುವ ಕಾರ್ಯವನ್ನು ಅವರು ನಿರ್ವಹಿಸುತ್ತಿದ್ದಾರೆ.
ಮಾಲ್ಡೀವ್ಸ್‌ನ ಹಿರಿಯ ಅಧಿಕಾರಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಅವರು ಬೆಳವಣಿಗೆಯನ್ನು ದೃಢಪಡಿಸಿದ್ದಾರೆ ಮತ್ತು “ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಉಳಿಯಲು ಸಾಧ್ಯವಿಲ್ಲ. ಇದು ಅಧ್ಯಕ್ಷ ಡಾ ಮೊಹಮ್ಮದ್ ಮುಯಿಝು ಮತ್ತು ಈ ಆಡಳಿತದ ನೀತಿಯಾಗಿದೆ” ಎಂದು ಹೇಳಿದರು.

ಪ್ರಮುಖ ಸುದ್ದಿ :-   ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ಮಾಲ್ಡೀವ್ಸ್ ಮತ್ತು ಭಾರತವು ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆ ನಡೆಸಲು ಉನ್ನತ ಮಟ್ಟದ ಕೋರ್ ಗುಂಪನ್ನು ಸ್ಥಾಪಿಸಿವೆ. ಭಾನುವಾರ ಬೆಳಗ್ಗೆ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಈ ಕೋರ್‌ ಗುಂಪು ತನ್ನ ಮೊದಲ ಸಭೆಯನ್ನು ನಡೆಸಿತು.
ನವೆಂಬರ್‌ನಲ್ಲಿ ನೀಡಿದ ಹೇಳಿಕೆಯಲ್ಲಿ, ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಯು “ಭಾರತವು ಮಾಲ್ಡೀವ್ಸ್‌ ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಗೌರವಿಸುತ್ತದೆ ಎಂದು ಭಾವಿಸುತ್ತದೆ” ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಮಾಲ್ಡೀವ್ಸ್ ಮಂತ್ರಿಗಳು ಹಾಗೂ ಅಧಿಕಾರಿಗಳು ಗೇಲಿ ಮಾಡಿದ ನಂತರ ಭಾರತ-ಮಾಲ್ಡೀವ್ಸ್ ಸಂಬಂಧಗಳು ಹದಗೆಟ್ಟವು. ಅಂತರ್ಜಾಲದಲ್ಲಿ ಹಲವರು ಲಕ್ಷದ್ವೀಪದ ಕಡಲತೀರಗಳನ್ನು ಮಾಲ್ಡೀವ್ಸ್‌ಗೆ ಹೋಲಿಸಿದ ನಂತರ ಮಾಲ್ಡೀವ್ಸ್ ಮಂತ್ರಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು
ಇದು ಭಾರತದ ಕಡೆಯಿಂದ ತೀವ್ರ ಪ್ರತಿಕ್ರಿಯೆಗೆ ಕಾರಣವಾಯಿತು, ಅನೇಕರು ಮಾಲ್ಡೀವ್ಸ್‌ಗೆ ಬಹಿಷ್ಕಾರಕ್ಕೆ ಕರೆ ನೀಡಿದರು. ಭಾರತವು ಅಧಿಕೃತವಾಗಿ ಮಾಲ್ಡೀವ್ಸ್‌ನೊಂದಿಗೆ ಸಮಸ್ಯೆಯನ್ನು ಪ್ರಸ್ತಾಪಿಸಿತು ಮತ್ತು ಮೂವರು ಮಂತ್ರಿಗಳಾದ ಮಲ್ಶಾ ಶರೀಫ್, ಮರಿಯಮ್ ಶಿಯುನಾ ಮತ್ತು ಅಬ್ದುಲ್ಲಾ ಮಹಜೂಮ್ ಮಜಿದ್ ಅವರನ್ನು ಮುಯಿಝು ಸರ್ಕಾರವು ಅಮಾನತುಗೊಳಿಸಿತು.

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

ಸತತವಾಗಿ ನಡೆದ ಇತ್ತೀಚಿನ ಬೆಳವಣಿಗೆಯಲ್ಲಿ, ತನ್ನ ಐದು ದಿನಗಳ ಚೀನಾ ಭೇಟಿಯನ್ನು ಮುಕ್ತಾಯಗೊಳಿಸಿದ ನಂತರ, ಅಧ್ಯಕ್ಷ ಮುಯಿಝು ಶನಿವಾರ ಯಾವುದೇ ದೇಶಕ್ಕೆ ತನ್ನ ದೇಶವನ್ನು “ಬೆದರಿಸುವ” ಹಕ್ಕಿಲ್ಲ ಎಂದು ಹೇಳಿದರು. “ನಾವು ಸಣ್ಣವರಾಗಿರಬಹುದು, ಆದರೆ ಅದು ನಮ್ಮನ್ನು ಬೆದರಿಸಲು ನಿಮಗೆ ಪರವಾನಗಿ ನೀಡುವುದಿಲ್ಲ” ಎಂದು ಭಾರತ-ಮಾಲ್ಡೀವ್ಸ್ ಸಮಸ್ಯೆಯನ್ನು ನೇರವಾಗಿ ಉಲ್ಲೇಖಿಸದೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement