ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ‌ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ.
ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153 (ಶಾಂತಿ ಕದಡಲು ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ಧಾರಾಮಯ್ಯ ಅವರ ಬಗ್ಗೆ ಸಂಸದ ಅನಂತಕುಮಾರ ಅವರು ಬಳಸಿದ ಭಾಷೆ, ಚಿನ್ನದ ಪಳ್ಳಿ ಮಸೀದಿಯನ್ನು ಬಾಬರಿ ಮಸೀದಿ ತರಹ ಒಡೆದು ಹಾಕಲಾಗುವುದು ಎಂಬ ಹೇಳಿಕೆ , ಜೊತೆಗೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಏಕವಚನ ಪ್ರಯೋಗಿಸಿದ್ದರು. ಅಲ್ಲದೇ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಎಂದು ಹೇಳಿಕೆ ನೀಡಿದ್ದರು.
ಸಂಸದರ ಹೇಳಿಕೆ ಮಾಧ್ಯಮಗಳಲ್ಲಿಯೂ ಪ್ರಸಾರವಾದ ಬಳಿಕ ಕಾಂಗ್ರೆಸ್ಸಿಗರು, ಸಂಸದ ಸಮಾಜದಲ್ಲಿ ಕೋಮು ಸೌಹಾರ್ದತೆ ಹಾಳುಗೆಡವುತ್ತಿದ್ದಾರೆ ಎಂದು ಟೀಕಿಸಿದ್ದರು. ಗೃಹ ಸಚಿವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ಈಗ ಕುಮಟಾ ಪೋಲೀಸರು ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement