ಬೊಲೆರೊ ವಾಹನ ಪಲ್ಟಿ: ಮೂವರು ಸಾವು

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಗ್ರಾಮದ ಬಳಿ ಬೊಲೆರೊ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಚಂದನಕೆರೆ ಗ್ರಾಮದ ಮಂಜುನಾಥ (45), ನಾಗರಾಜ (39) ಶಿವಮೊಗ್ಗ ಆಸ್ಪತ್ರೆಯಲ್ಲಿ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ಗೌತಮ (16) ಎಂಬವರು ಮೃತಪಟ್ಟಿದ್ದಾರೆ. ‌ ಅವರು ಶಿಕಾರಿಪುರ ತಾಲ್ಲೂಕಿನ ಅರಿಷಿನಗೆರೆ ಗ್ರಾಮದಲ್ಲಿ ಅಡಿಕೆ ಕೊಯ್ಲು ಮಾಡಿಕೊಂಡು ವಾಹನದಲ್ಲಿ ತುಂಬಿಕೊಂಡು ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಮಂಜುನಾಥ, ನಾಗರಾಜ ಮತ್ತು ಗೌತಮ ಅವರು ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೂವರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement