ಮಂದಿರ ನಿರ್ಮಾಣಕ್ಕೆ 20 ರೂ. ದೇಣಿಗೆ ನೀಡಿದ್ದ ಕಸ ಸಂಗ್ರಹಿಸುವ ವೃದ್ಧೆಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಹಲವಾರು ಭಕ್ತರು ತಮ್ಮ ಕೈಲಾದಷ್ಟು ಹಾಗೂ ತಮ್ಮ ಶಕ್ತಿಗೂ ಮೀರಿ ದೇಣಿಗೆಯನ್ನು ನೀಡಿದ್ದಾರೆ. ಇದೇ ರೀತಿ ಛತ್ತೀಸ್‌ಗಢದ ಪ್ರಯಾಗರಾಜ ಎಂದೂ ಕರೆಯಲ್ಪಡುವ ರಾಜೀಂ ಎಂಬಲ್ಲಿ ಕಸ ಸಂಗ್ರಹಿಸುವ ಬಿಹುಲಾ ಬಾಯಿ ಕೂಡ 20 ರೂ. ದೇಣಿಗೆ ನೀಡಿದ್ದಾರೆ. ಇದಕ್ಕಾಗಿ ಅಯೋಧ್ಯೆಯ ರಾಮಮಂದಿರದಲ್ಲಿನ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಗಿದೆ.
ಬಿಹುಲಾ ಬಾಯಿ ಅವರು ಪ್ರತಿನಿತ್ಯ ಕಸ ಸಂಗ್ರಹಿಸಿ ಅದರಿಂದ ಬರುವ ಹಣದಲ್ಲಿ ಜೀವನ ಸಾಗಿಸುವ 85 ವರ್ಷ ವಯಸ್ಸಿನ ಓರ್ವ ವೃದ್ಧ ಮಹಿಳೆ. ಇವರು 2021ರಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಕಾರ್ಯ ನಡೆಯುತ್ತಿದ್ದ ವೇಳೆ ತಮ್ಮ ಇಡೀ ದಿನ ಕಸ ಸಂಗ್ರಹಿಸಿ ಬಂದ 40 ರೂ.ಗಳ ಸಂಪಾದನೆಯಲ್ಲಿ ಅರ್ಧದಷ್ಟು ಹಣವನ್ನು ಅಂದರೆ 20 ರೂ. ಹಣವನ್ನು ದೇಣಿಗೆಯಾಗಿ ನೀಡಿದ್ದರು.

ಬಿಹುಲಾ ಬಾಯಿ ಅವರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದ ದೇಣಿಗೆಯನ್ನು ಗಮನಿಸಿ ಹಿಂದೂ ಸಂಘಟನೆಗಳು ಬಿಹುಲಾ ಬಾಯಿ ಅವರ ಗುಡಿಸಿಲಿಗೆ ತೆರಳಿ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಿವೆ. ವಿಎಚ್‌ಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ವರ್ಮಾ ಈ ಹೃತ್ಪೂರ್ವಕ ಆಹ್ವಾನವನ್ನು ನೀಡಲು ಸೋಮವಾರ ವೈಯಕ್ತಿಕವಾಗಿ ಭೇಟಿ ನೀಡಿದರು.

ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದ ಬಿಹುಲಾ ಬಾಯಿ ಅವರು ಭಾವುಕರಾಗಿ ಮಾತನಾಡಿ, ಇದೀಗ ನನ್ನ ಬದುಕಲ್ಲಿ ಸಂತೋಷದ ಹೊಳೆ ಹರಿದಿದೆ. ಕಸ ಆರಿಸಿ ಬಂದ 40 ರೂ. ಹಣದಲ್ಲಿ 20 ರೂ. ಗಳನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದೇನೆ. ಈಗ ನನಗೆ ಅಯೋಧ್ಯೆಗೆ ಆಹ್ವಾನ ಬಂದಿದ್ದು, ಇದರಿಂದ ನನಗೆ ಅತ್ಯಂತ ಆನಂದವಾಗಿದೆ ಹಾಗೂ ನಾನು ಭಗವಾನ್‌ ಶ್ರೀರಾಮನ ದರ್ಶನ ಪಡೆಯಲು ಅಯೋಧ್ಯೆಗೆ ತೆರಳುತ್ತೇನೆ. ನನ್ನ ವೃದ್ಧಾಪ್ಯದಲ್ಲಿ ಅಯೋಧ್ಯೆಗೆ ತೆರಳುತ್ತಿರುವುದಕ್ಕೆ ನನಗೆ ಸಂತಸವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement