ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು : ಸಂಸದ ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಅನಂತಕುಮಾರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಜನರು ರಾಜಕಾರಣಿಗಳನ್ನು ನಂಬದಂತಹ ಪರಿಸ್ಥಿತಿ ಇದೆ. ಹೀಗಾಗಿ ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ನಮ್ಮ ಮಾತು ಸಮಾಜ ಒಪ್ಪುವಂತೆ ಇರಬೇಕು ಎಂದು ತಿಳಿಸಿದರು.
ಅನಂತಕುಮಾರ ಹೆಗಡೆ ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಈ ಬಗ್ಗೆ ನಾನು ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಅವರು ನೀಡಿರುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು ಎಂದು ತಿಳಿಸಿದರು.
ಬಿಜೆಪಿ ವರಿಷ್ಠರನ್ನು ಮಾಜಿ ಸಚಿವ ವಿ.ಸೋಮಣ್ಣ ಭೇಟಿಯಾದ ವಿಚಾರವಾಗಿ ಮಾತನಾಡಿದ ಅವರು, ಪಕ್ಷಕ್ಕೆ ಅವರದ್ದೇ ಆದ ಕೊಡುಗೆ ಇದೆ. ಕೇಂದ್ರದ ಮುಂದೆ ಅವರು ವ್ಯಕ್ತಪಡಿಸಿದ ವಿಚಾರದ ಬಗ್ಗೆ ನಮ್ಮದೇನೂ ಅಭ್ಯಂತರ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ರಾಜ್ಯಾಧ್ಯಕ್ಷನಾಗಿ ನಾನು ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement