ಜನವರಿ 19ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ

ಬೆಂಗಳೂರು: ಪ್ರಧಾನಿ ಮೋದಿ ಅವರು ಜನವರಿ 19ರಂದು ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿಯನ್ನು ಮುಂದೂಡಲಾಗಿದೆ.
ಪ್ರಧಾನಿ ಮೋದಿ ಜನವರಿ 19ರಂದು ರಂದು ರಾಜ್ಯಕ್ಕೆ ಭೇಟಿ ನೀಡಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಪಕ್ಷದ ಕಚೇರಿಯಲ್ಲಿ ಪ್ರಮುಖ ಪದಾಧಿಕಾರಿಗಳ ಜತೆ ಸಭೆ ನಡೆಸಿ ಪ್ರಧಾನಿ ಆಗಮನ, ಅದ್ಧೂರಿ ಸ್ವಾಗತ ನೀಡುವ ಬಗ್ಗೆ ಚರ್ಚೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನು ಮುಂದಕ್ಕೆ ಹಾಕಲಾಗಿದೆ.
ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ ಅವರು, ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜ. ೧೯ ರಂದು ನಡೆಯಬೇಕಿದ್ದ ರಾಜ್ಯ ಕಾರ್ಯಕಾರಿಣಿಯನ್ನು ಮುಂದೂಡಲಾಗಿದೆ. ಬೆಂಗಳೂರಿನ ಏರೋಸ್ಪೆಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ ಇಂಡಿಯಾ, ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುವ ಕಾರಣ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರಧಾನಿ ಅವರ ಸ್ವಾಗತದ ಸಿದ್ಧತೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಮುಖ ನಾಐಕರ ಜತೆ ಚರ್ಚೆ ಮಾಡಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ವೀಡಿಯೊ...| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement