ಆಂಧ್ರ ಕಾಂಗ್ರೆಸ್ ಅಧ್ಯಕ್ಷರಾಗಿ ವೈ.ಎಸ್. ಶರ್ಮಿಳಾ ನೇಮಕ

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ಮಂಗಳವಾರ ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದ್ದರು.
ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್‌ ಈ ನೇಮಕ ಮಾಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ)ಗೆ ವಿಶೇಷ ಆಹ್ವಾನಿತರಾಗಿ ಆಂಧ್ರಪ್ರದೇಶದ ನಿರ್ಗಮಿತ ಪಿಸಿಸಿ ಅಧ್ಯಕ್ಷ ರುದ್ರರಾಜು ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ಶರ್ಮಿಳಾ ಅವರು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ಸ್ಪರ್ಧೆಯಿಂದ ಹೊರಗುಳಿದಿದ್ದರು. ನವೆಂಬರ್ 30 ರಂದು ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವೈಎಸ್‌ಆರ್‌ಟಿಪಿ ಬೆಂಬಲ ನೀಡುವುದಾಗಿ ಶರ್ಮಿಳಾ ಘೋಷಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement