ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಫೋಟ ; 8 ಮಂದಿಗೆ ಗಾಯ, ಐದು ಮನೆಗಳಿಗೆ ಹಾನಿ

ಬೆಂಗಳೂರು : ಬೆಂಗಳೂರಿನ ಯಲಹಂಕದ ಎಲ್‌ಬಿಎಸ್‌ನಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.
ಸಿಲಿಂಡರ್ ಸ್ಫೋಟದಿಂದಾಗಿ ಒಬ್ಬರಿಗೆ 60% ರಷ್ಟು ಸುಟ್ಟಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡ ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರವಾಗಿದೆ. ಪಕ್ಕದ ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಕಿಟಕಿಗಳು, ಬಾಗಿಲುಗಳು ತುಂಡಾಗಿವೆ ಎಂದು ಹೇಳಲಾಗಿದೆ. ವಿದ್ಯುತ್ ಕೇಬಲ್‌ಗಳಿಗೂ ಹಾನಿಯಾಗಿದ್ದು, ತಕ್ಷಣಕ್ಕೆ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement