ಲೋಕಸಭೆ ಚುನಾವಣೆ: ಮೈಸೂರಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ” ಎಂದು ರೇಷ್ಮೆ ಮತ್ತು ಪಶು ಸಂಗೋಪನೆ ಖಾತೆ ಸಚಿವ ಕೆ.ವೆಂಕಟೇಶ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಮೈಸೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದನ್ನೇ ಹೇಳಿದ್ದಾರೆ. ಆದರೆ ಬಿಜೆಪಿಯವರು ಪದೇ ಪದೇ ಯತೀಂದ್ರ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಅದು ಬಿಜೆಪಿಯವರ ಚಟವಾಗಿದೆ” ಎಂದು ಹೇಳಿದರು.
ಲೋಕಸಭೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, “ನಾನು ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ವಯಸ್ಸು ಆಗಿದೆ. ಇನ್ನು ಮುಂದೆ ಸ್ಪರ್ಧಿಸುವುದಿಲ್ಲ” ಎಂದು ತಿಳಿಸಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರದ ವರೆಗೆ ಜೋರಾಗಿ ಮಳೆ : ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement