ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ : ಆರೋಪಿ ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡಿವ ಅದರ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಬಗ್ಗೆ ಯುವಕನ ವಿರುದ್ಧ ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರಾದ, ಸುರತ್ಕಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಅನಿಲಕುಮಾರ (34 ವರ್ಷ) ಆರೋಪಿ ಸರ್ಕಾರದ ಸವಲತ್ತು ಪಡೆಯಲು ಪಡಿತರ ಚೀಟಿಗೆ ತನ್ನ ಹೆಸರು ಸೇರಿಸಲು ಆತ ಯತ್ನಿಸಿದ್ದ. ಸರ್ವರ್‌ ಸಮಸ್ಯೆಯಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಮೂರು ತಿಂಗಳ ಕಾಲ ಪ್ರಯತ್ನಿಸಿದ ಬಳಿಕವೂ ಪಡಿತರ ಚೀಟಿಗೆ ಹೆಸರು ಸೇರ್ಪಡೆ ಮಾಡಲು ಸಾಧ್ಯವಾಗದ ಕಾರಣ ಹತಾಶೆಗೊಳಗಾಗಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್‌ ಮಾಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎನ್ನಲಾಗಿದೆ.
ಆರೋಪಿಯು ಮುಖ್ಯಮಂತ್ರಿಯವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಬಗ್ಗೆ ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಉಪಾಯುಕ್ತರಿಗೆ ದೂರನ್ನು ಸಲ್ಲಿಸಲಾಗಿತ್ತು.. ಇದರ ಆಧಾರದಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement