ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಜಾಮೀನು ಮಂಜೂರು

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.
ಪ್ರಭಾಕರ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜನವರಿ 10ರಂದು ಕಾಯ್ದಿರಿಸಿದ್ದ ಆದೇಶವನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ ಟಿ ಅವರು ಬುಧವರಾರ ಪ್ರಕಿಟಿಸಿದರು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ಆರೋಪಿಯು ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯ ತಿರುಚುವಂತಿಲ್ಲ, ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ ಎಂದು ವರದಿ ಹೇಳಿದೆ.
ಪ್ರಭಾಕರ್‌ ಭಟ್‌ ಅವರು ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಡಿಸೆಂಬರ್‌ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ: ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ನೀಡಿದ್ದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಭಾಕರ ಭಟ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪ್ರಮುಖ ಸುದ್ದಿ :-   ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement