ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾದ ಯತೀಂದ್ರ ಹೇಳಿಕೆ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದು ಈಗ ಪುನಃ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.
ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಅಣ್ಣೇಚಾಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು 5 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಿದ್ದರಾಮಯ್ಯ ಸಾಬೀತು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಸಾಮಾಜಿಕ ಕಾರ್ಯಕ್ರಮಕ್ಕಾಗಿ ಯಾವ ರಾಜ್ಯದಲ್ಲಿಯೂ ಯಾವ ಸರ್ಕಾರವೂ ಇಷ್ಟೊಂದು ಹಣ ಖರ್ಚು ಮಾಡಿಲ್ಲ. ಕಲ್ಯಾನ ಯೋಜನೆಗಳಿಗಾಗಿ ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಅವರಿಗೆ ಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

2024ರ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತದೆ. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದ್ದು, ಮುಂದಿನ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗಲಿದೆ. ಹಾಗಾಗಿ ನಿಮ್ಮ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಮನವಿ ಮಾಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement