ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ ಕಬ್ಬಾಳು ಗ್ರಾಮದ ಅಭಿಷೇಕ ಗೌಡ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ನೇತೃತ್ವದ ವಿಭಾಗೀಯ ಪೀಠವು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ..?
ಕೇಂದ್ರೀಯ ಸಂರಕ್ಷಿತ ಸ್ಮಾರಕ ಎಂದು ಘೋಷಿಸಲ್ಪಟ್ಟ ಜುಮ್ಮಾ ಮಸೀದಿಯ ಒಳಗೆ ಎರಡು ವರ್ಷಗಳಿಂದ ಮದರಸಾ ನಡೆಸಲಾಗುತ್ತಿದೆ. ಅಲ್ಲಿ 50 ಮಕ್ಕಳಿಗೆ ವಸತಿ ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ. ಶೌಚಾಲಯ, ಸ್ನಾನಗೃಹ, ಅಡುಗೆ ಮನೆ ನಿರ್ಮಿಸಲಾಗಿದೆ. ಬಟ್ಟೆ ತೊಳೆಯಲೂ ವ್ಯವಸ್ಥೆ ಮಾಡಲಾಗಿದೆ. ಸಂಕೀರ್ಣವಾದ ಕೆತ್ತನೆಗಳಿಗೆ ಹಾನಿ ಮಾಡಲಾಗಿದೆ ಎಂದು ಆಕ್ಷೇಪಿಸಲಾಗಿದೆ.
ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ಸ್ಥಳ ಮತ್ತು ಅವಶೇಷಗಳ ಕಾಯಿದೆ ಸೆಕ್ಷನ್‌ 16 ಮತ್ತು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳ ಮತ್ತು ಅವಶೇಷಗಳ (ತಿದ್ದುಪಡಿ ಮತ್ತು ಸಿಂಧುತ್ವ)‌ ನಿಯಮಗಳ ನಿಯಮ 7 ಮತ್ತು 8ರ ಉಲ್ಲಂಘನೆಯಾಗಿದೆ. ಮದರಸಾ ಮುಚ್ಚುವ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಕೋರಲಾಗಿದೆ

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement