ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ : ಜ.22ರಂದು ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ನವದೆಹಲಿ: ಜನವರಿ 22 ರಂದು ನಿಗದಿಯಾಗಿರುವ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಆ ದಿನ ಕೇಂದ್ರ ಸರ್ಕಾರ ‘ಅರ್ಧ ದಿನ’ ರಜೆ ಘೋಷಿಸಿದೆ.
” ನೌಕರರು ಆಚರಣೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡಲು, ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಜನವರಿ 22 ರಂದು 2:30 ಗಂಟೆ ವರೆಗೆ (ಮಧ್ಯಾಹ್ನ 2:30) ಅರ್ಧ ದಿನ ರಜೆ ಘೋಷಿಸಲಾಗಿದೆ” ಎಂದು ಸರ್ಕಾರದ ಪತ್ರಿಕಾ ಹೇಳಿಕೆ ತಿಳಿಸಿದೆ.
“ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಬಹುದು” ಎಂದು ಹೇಳಿಕೆ ತಿಳಿಸಿದೆ.

ರಜೆ ಘೋಷಣೆ ಕುರಿತು ಸಾರ್ವಜನಿಕರಿಂದ ದೊಡ್ಡ ಬೇಡಿಕೆಯಿತ್ತು. ಜನರ ಭಾವನೆಗಳಿಗೆ ಬೆಲೆಕೊಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್‌  ತಿಳಿಸಿದ್ದಾರೆ.ರಾಮಮಂದಿರ ಉದ್ಘಾಟನೆ ದಿನ ಹಲವು ರಾಜ್ಯಗಳು ರಜೆ ಘೋಷಿಸಿವೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಪ್ರಮುಖ ಸುದ್ದಿ :-   ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಸೋಮವಾರ (ಜ.22ರಂದು) ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನರಾಗಿ ಗರ್ಭಗುಡಿಯಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. 7,000 ಕ್ಕೂ ಹೆಚ್ಚು ಜನರು ದೇವಸ್ಥಾನ ಟ್ರಸ್ಟ್, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement